ಕಲ್ಪ ಮೀಡಿಯಾ ಹೌಸ್ | ಬ್ಯಾಂಕಾಕ್/ಬೆಂಗಳೂರು |
ತೀವ್ರ ಹೃದಯಾಘಾತಕ್ಕೊಳಗಾಗಿ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನರಾಗಿದ್ದಾರೆ.
ತಮ್ಮ ಕುಟುಂಬಸ್ಥರೊಂದಿಗೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳೀದ್ದ ಸ್ಪಂದನಾ ಅವರಿಗೆ ತೀವ್ರ ಹೃದಯಾಘಾತವಾಗಿದೆ. ತತಕ್ಷಣವೇ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ವಿಜಯ ರಾಘವೇಂದ್ರ, ಸ್ಪಂದನಾ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ. ಶಿವರಾಂ ಸೇರಿದಂತೆ ಕುಟುಂಬಸ್ಥರು ಬ್ಯಾಂಕಾಕ್‌ಗೆ ತೆರಳಿದ್ದಾರೆ.
ನಾಳೆ ಮುಂಜಾನೆ ಬೆಳಿಗ್ಗೆ ಸ್ಪಂದನಾ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















