ಕಲ್ಪ ಮೀಡಿಯಾ ಹೌಸ್ | ಬ್ಯಾಂಕಾಕ್ |
ಥಾಯ್ಲೆಂಡ್ ನವ್ವಿಯಲ್ಲಿ ಶುಕ್ರವಾರ ಪ್ರಬಲ ಭೂಕಂಪ #Heavy Earthquake ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ತೀವ್ರತೆ ಪ್ರಮಾಣ 7.7ರಷ್ಟು ದಾಖಲಾಗಿದೆ. ಭೂಕಂಪನದಲ್ಲಿ ಕನಿಷ್ಠ 3 ಸಾವನಪ್ಪಿದ್ದು, 90 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಕಟ್ಟಡವು ಕುಸಿದಿದ್ದು ಅದರಡಿಯಲ್ಲಿ ಹಲವು ಕಾರ್ಮಿಕರು ಸಿಲುಕಿದ್ದು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Also read: ಒಳಮೀಸಲಾತಿ ನೀಡಿ ಜನರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಬದ್ಧ: ಸಚಿವ ಹೆಚ್.ಕೆ. ಪಾಟೀಲ್
ಇನ್ನು ಭೂಕಂಪದ ಪರಿಣಾಮವಾಗಿ ಥಾಯ್ ಪ್ರಧಾನಿ ಪೇಟೊಂಗ್ಟಾರ್ನ್ ಶಿನವಾತ್ರಾ ಬ್ಯಾಂಕಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಮೆಟ್ರೋ ಮತ್ತು ಲಘು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಥಾಯ್ಲೆಂಡ್ ಮಾತ್ರವಲ್ಲದೇ ನೆರೆಯ ಬಾಂಗ್ಲಾದೇಶದ ಢಾಕಾ, ಚಟ್ಟೋಗ್ರಾಮ ಮತ್ತು ಮ್ಯಾನ್ಮಾರ್ ನಲ್ಲೂ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ತೀವ್ರತೆ ಪ್ರಮಾಣ 7.3ರಷ್ಟು ದಾಖಲಾಗಿದೆ. ಈ ಮೂರು ದೇಶಗಳಲ್ಲಿ ಸಂಭವಿಸಿದ ವಿವಿಧ ಅವಘಡಗಳಲ್ಲಿ ಈ ವರೆಗೂ ಕನಿಷ್ಠ 20 ಮಂದಿ ಸಾವಿಗಿಡಾಗಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post