ಕಲ್ಪ ಮೀಡಿಯಾ ಹೌಸ್ | ಬಂಟ್ವಾಳ |
ಖಾಸಗಿ ಕಾರ್ಯಕ್ರಮವೊಂದಕ್ಕೆ ಶಾಮಿಯಾನ ಹಾಕುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಿಹಾರ ಮೂಲಕದ ಯುವಕನೋರ್ವ ಸಾವನ್ನಪ್ಪಿ, ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳದ ಕಡೇಶ್ವಾಲ್ಯದ ಕಾಡಬೆಟ್ಟು ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಬಿಹಾರ ಮೂಲದ ಕುಂದನ್ ಕುಮಾರ್(18) ಎಂದು ಗುರುತಿಸಲಾಗಿದೆ.
ಪೆಂಡಾಲ್ ಹಾಕುವ ವೇಳೆ ಕಬ್ಬಿಣದ ರಾಡ್ ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ದುರಂತ ಸಂಭವಿಸಿದೆ.
ಘಟನೆಯಲ್ಲಿ ಕಡೇಶ್ವಾಲ್ಯ ಗ್ರಾಮದ ಪ್ರಸನ್ನ, ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಎಂಬವರು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತ ಶರೀರವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ನಿರೀಕ್ಷಕ ಶಿವಕುಮಾರ್, ಠಾಣಾಧಿಕಾರಿ ಹರೀಶ್, ಗ್ರಾಮ ಕರಣಿಕ ಕರಿಬಸಪ್ಪ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post