ಕಲ್ಪ ಮೀಡಿಯಾ ಹೌಸ್ | ಕಾರವಾರ |
ಬಂಟ್ವಾಳ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಬಾಡಿಗೆ ಮನೆಯಲ್ಲಿ ನಡೆದಿದೆ.
ಉತ್ತರ ಕನ್ನಡದ ನಿವಾಸಿ ಕೀರಪ್ಪ(54) ಎಂಬವರು ಆತ್ಮಹತ್ಯೆ ಮಾಡಿಕೊಂಡ ಸಬ್ ಇನ್ಸ್ ಪೆಕ್ಟರ್. ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ಶಿರಸಿಯಲ್ಲಿ ಸೇವೆ ಸಲ್ಲಿಸಿ ಹಾಲಿ ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಕೀರಪ್ಪ ಘಟಕಾಂಭ್ಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಮೃತ ಪಿಎಸ್‌ಐ ಕೀರಪ್ಪ ಘಟಕಾಂಭ್ಳೆ ಅವರು ಮೂಲತಃ ಮುಂಡಗೋಡ ನಿವಾಸಿಯಾಗಿದ್ದರು. ಅವರು ಮುಂಡಗೋಡ, ಶಿರಸಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಕಳೆದ ಕೆಲ ತಿಂಗಳ ಹಿಂದಷ್ಟೆ ಪ್ರಮೋಷನ್ ಪಡೆದು ಪಿಎಸ್‌ಐ ಆಗಿ ಬಂಟ್ವಾಳಕ್ಕೆ ವರ್ಗಾವಣೆಗೊಂಡಿದ್ದರು. ಇಂದು ಸಂಜೆ ವೇಳೆಯಲ್ಲಿ ಕರ್ತವ್ಯದಲ್ಲಿರುವಾಗಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಇದುವರೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post