ಕಲ್ಪ ಮೀಡಿಯಾ ಹೌಸ್ | ಬಂಟ್ವಾಳ |
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ನಡೆದ ಭೀಕರ ಕಾರು ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಆರು ಮಂದಿ ಗಂಭಿರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಶನಿವಾರ ಮುಂಜಾನೆ 5ರ ಸುಮಾರಿಗೆ ಬೆಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಿ.ಸಿ. ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನಪ್ಪಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75), ರಮ್ಯಾ(23) ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ರಸ್ತೆಯಲ್ಲಿದ್ದ ವಾಹನವನ್ನು ತೆರವುಗೊಳಿಸಿದ್ದಾರೆ. ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















