ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಸಾಯಿನಗರ ವಿನಯ್ ಕುಮಾರ್(25) ಎಂಬಾತನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಇಂದು ರಾತ್ರಿ 9 ಗಂಟೆ ವೇಳೆಗೆ ಘಟನೆ ನಡೆದಿದೆ ಎನ್ನಲಾಗಿದ್ದು, ದುಷ್ಕರ್ಮಿಗಳು ವಿನಯ್ ಕುಮಾರ್’ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಈಗ ಮೃತಪಟ್ಟಿದ್ದಾನೆ.
ಮೃತ ದೇಹವನ್ನು ತಾಲೂಕು ಸರ್ಕಾರಿ ಆಸ್ಪತೆಗೆ ರವಾನಿಸಲಾಗಿದ್ದು, ಆಸ್ಪತ್ರೆ ಬಳಿಯಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಹೊಸಮನೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















