ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕನಕ ಮಂಟಪ ಮೈದಾನದಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ಬಂಧನವಾಗಿ, ಜಾಮೀನು ಪಡೆದುಕೊಂಡಿರುವ ಶಾಸಕ ಬಿ.ಕೆ. ಸಂಗಮೇಶ್ವರ ಪುತ್ರ ಬಸವೇಶ್ ಅವರು ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವೇಶ್ ಅವರಿಗೆ ಎ.12ರಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ, ಎರಡು ದಿನಗಳ ಕಾಲ ಸರ್ಕಾರಿ ರಜೆ ಇದ್ದ ಕಾರಣ ಬಿಡುಗಡೆಯಾಗಿರಲಿಲ್ಲ. ನ್ಯಾಯಾಲಯದ ಆದೇಶದಂತೆ ಜೈಲು ಅಧಿಕಾರಿಗಳು ಇಂದು ಸಂಜೆ ಬಸವೇಶ್ ಅವರನ್ನು ಬಿಡುಗಡೆ ಮಾಡಿದ್ದಾರೆ.
ಕಾಂಗ್ರೆಸ್ ಹಾಗೂ ಶಾಸಕರ ಅಪಾರ ಸಂಖ್ಯೆಯ ಅಭಿಮಾನಿಗಳು ಬಸವೇಶ್ ಅವರನ್ನು ಬರಮಾಡಿಕೊಂಡರು. ಕಾಂಗ್ರೆಸ್ ಹಾಗೂ ಶಾಸಕರ ಅಪಾರ ಸಂಖ್ಯೆಯ ಅಭಿಮಾನಿಗಳು ಬಸವೇಶ್ ಅವರನ್ನು ಬರಮಾಡಿಕೊಂಡರು. ಶಾಸಕರ ನಿವಾಸದ ಬಳಿ ಸಾವಿರಾರು ಅಭಿಮಾನಿಗಳು ಬಸವೇಶ್ ಅವರನ್ನು ಸ್ವಾಗತಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿದರು. ನೂರಾರು ಮಂದಿ ಅಭಿಮಾನಿಗಳು ಬಸವೇಶ್ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಲು ಮುಗಿಬಿದ್ದಿದ್ದು ಕಂಡು ಬಂದಿತು.
ಫೆ.27 ಮತ್ತು 28 ರಂದು ಭದ್ರಾವತಿಯ ಕನಕ ಮಂಟಪದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿರುವುದಕ್ಕೆ ತಾಲೂಕು ಬಿಜೆಪಿ ಮುಖಂಡ ಧರ್ಮಪ್ರಸಾದ್ ಮತ್ತು ಅವರ ಗುಂಪಿನ ಮೇಲೆ ಶಾಸಕರ ಪರ ಬೆಂಬಲಿಗರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ನಡೆದಿತ್ತು ಎಂದು ಆರೋಪಿಸಲಾಗಿತ್ತು.
ಈ ಘಟನೆಯಲ್ಲಿ ಸಂಗಮೇಶ್ವರ್ ಪುತ್ರ ಬಸವೇಶ್ ಹಾಗೂ ಇತರೆ 15 ಜನರ ವಿರುದ್ಧ 307 ಮತ್ತು ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಸವೇಶ್ ಸೇರಿದಂತೆ 15 ಜನರನ್ನು ಮಾರ್ಚ್ 6 ರಂದು ಪೊಲೀಸರು ಬಂಧಿಸಿದ್ದರು. ಬಸವೇಶ್ ಅವರ ಜಾಮೀನು ಅರ್ಜಿಯನ್ನು ಸ್ಥಳೀಯ ಭದ್ರಾವತಿ ಮತ್ತು ಶಿವಮೊಗ್ಗ ನ್ಯಾಯಾಲಯ ತಿರಸ್ಕರಿಸಿತ್ತು. ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್‌ನಿಂದ ಜಾಮೀನು ಪಡೆದುಕೊಳ್ಳಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post