ಕಲ್ಪ ಮೀಡಿಯಾ ಹೌಸ್ | ಭಟ್ಕಳ |
ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದ್ದು, ಬೋಟ್ ಮೂಲಕ ಮೃತ ದೇಹಗಳನ್ನು ಪತ್ತೆ ಮಾಡಲಾಗಿದೆ.
ಮೃತ ವಿದ್ಯಾರ್ಥಿನಿಯರನ್ನು ದೀಕ್ಷಾ(15), ಲಾವಣ್ಯ(15), ವಂದನಾ(15) ಎಂದು ಗುರುತಿಸಲಾಗಿದೆ.
ಮೂವರು ವಿದ್ಯಾರ್ಥಿನಿಯರು ನಿನ್ನೆ ಇಲ್ಲಿನ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ತತಕ್ಷಣವೇ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಬೋಟ್ ಮೂಲಕ ಶವಗಳನ್ನು ಹೊರ ತೆಗೆದಿದ್ದಾರೆ. ನಿನ್ನೆ ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವ ಪತ್ತೆಯಾಗಿತ್ತು.
Also read: ಕೃಷಿ ವೆಚ್ಚ ಕಡಿಮೆ ಮಾಡಲು ಈ ಕ್ರಮಕ್ಕೆ ಒತ್ತು ನೀಡಿ: ಪ್ರಾಧ್ಯಾಪಕ ಡಾ. ಮಹೇಶ್ವರಪ್ಪ
ನೀರಿನಲ್ಲಿ ಕೊಚ್ಚಿ ಹೋಗಿದ್ದ ಉಳಿದ ಮೂವರು ವಿದ್ಯಾರ್ಥಿನಿಯರಿಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಇದೀಗ ಮೂವರು ವಿದ್ಯಾರ್ಥಿನಿಯರ ಶವವನ್ನು ಸಮುದ್ರದಿಂದ ಹೊರತೆಗೆಯಲಾಗಿದೆ.
ಪ್ರವಾಸೋದ್ಯಮ ಇಲಾಖೆಯಿಂದ ಲೈಫ್ ಗಾರ್ಡ್ ಸಿಬ್ಬಂದಿಗಳಿಗೆ ತುರ್ತು ಸಂದರ್ಭದಲ್ಲಿ ಅಗತ್ಯ ಇರುವ ಜೀವ ರಕ್ಷಕ ಸಾಮಗ್ರಿಗಳು ಇಲ್ಲಿಯ ತನಕ ನೀಡದೆ ಇರುವುದರಿಂದ ಸಕಾಲದಲ್ಲಿ ಜೀವ ರಕ್ಷಣೆ ಮಾಡಲು ವಿಫಲರಾಗಿರುತ್ತಾರೆ. ಅಲ್ಲದೆ ನುರಿತ ತರಬೇತಿ ಪಡೆದ ಸಿಬ್ಬಂದಿಗಳಲ್ಲದೆ ಇರುವುದು ಜೀವ ರಕ್ಷಣೆ ಮಾಡಲು ಅಸಮರ್ಥರಾಗಿರುತ್ತಾರೆ ಎಂದು ಸ್ಥಳೀಯರು ದೂರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















