ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 53 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,186ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‌ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 37 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬುಧವಾರ ಒಟ್ಟು 2691 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 53 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 13,186 ಕ್ಕೆ ಏರಿಕೆಯಾಗಿದೆ. ಒಟ್ಟು 64 ಜನ ಕೋವಿಡ್‌ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 12,858 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 263 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,06,997 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 1,43,795 ಜನರ ಮಾದರಿ ಸಂಗ್ರಹಿಸಲಾಗಿದ್ದು, 1,28,684 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1428 ಜನರ ವರದಿ ಬರುವುದು ಬಾಕಿ ಇದೆ. 497 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post