ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ಗಾಣಗಾಪುರದಲ್ಲಿ ದೇವರ ದರ್ಶನ ಮಾಡಿ ಹಿಂತಿರುತ್ತಿದ್ದ ವೇಳೆ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ.
ಗಾಣಗಾಪುರ ದತ್ತಾತ್ರೇಯ ದೇವರ ದರ್ಶನ ಮಾಡಿ ಮಹಾರಾಷ್ಟ್ರದ ಕಡೆಗೆ ಹಿಂತಿರುತ್ತಿದ್ದ ವೇಳೆ, ಜಿಲ್ಲೆಯ ಅಫಜಲಪುರ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಚಾಲಕ ಸೇರಿ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post