ಕಲ್ಪ ಮೀಡಿಯಾ ಹೌಸ್ | ಧಾರವಾಡ |
2 ವರ್ಷದ ಮಗುವೊಂದು #Child ಆಕಸ್ಮಿಕವಾಗಿ ಒಂದು ರೂಪಾಯಿ ನಾಣ್ಯವನ್ನು ಬಾಯಿಗೆ ಹಾಕಿಕೊಂಡಿದ್ದು, ಅದು ಗಂಟಲಲ್ಲಿ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ.
ಮೃತ ಮಗುವನ್ನು ಧಾರವಾಡದ #Dharwad ಕೊಳಿಕೇರಿ ಬಡಾವಣೆಯ ಮಹ್ಮದ್ ಜುಬೇರ್ ಸಾಲಿ(2) ಎಂದು ಗುರುತಿಸಲಾಗಿದೆ.
ಮಗು ಮನೆಯಲ್ಲಿ ಆಟವಾಡುತ್ತಿತ್ತು. ಈ ವೇಳೆ ಒಂದು ರೂಪಾಯಿ ನಾಣ್ಯವನ್ನು ಬಾಯಿಗೆ ಹಾಕಿಕೊಂಡಿದ್ದು, ಅದು ಗಂಟಲಲ್ಲಿ ಸಿಲುಕಿದೆ.
ಗಂಟಲಲ್ಲಿ ನಾಣ್ಯ ಸಿಲುಕಿ ಒದ್ದಾಡುತ್ತಿದ್ದ ಮಗುವನ್ನು ಪೋಷಕರು ತತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post