ಕಲ್ಪ ಮೀಡಿಯಾ ಹೌಸ್ | ಬೀಜಿಂಗ್ |
ಕೊರೋನಾ ಜನಕ ಚೀನಾದ ನಗರವೊಂದರಲ್ಲಿ ಮತ್ತೆ ಲಕ್ಷಣ ರಹಿತ ಮೂರು ಕೊರೋನಾ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಆ ನಗರವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ.
ಮಧ್ಯ ಚೀನಾದ ಯುಝೌ ನಗರದಲ್ಲಿ ಸೋಮವಾರ ರಾತ್ರಿಯಿಂದಲೇ ಎಲ್ಲ ನಾಗರಿಕರು ತಮ್ಮ ಮನೆಗಳಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ನಗರದಲ್ಲಿ ಈಗಾಗಲೇ ಬಸ್ ಮತ್ತು ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಶಾಪಿಂಗ್ ಮಾಲ್‌ಗಳು, ವಸ್ತುಸಂಗ್ರಹಾಲಯಗಳು ಮತ್ತು ಪ್ರವಾಸಿ ಕೇಂದ್ರಗಳನ್ನು ಸಹ ಮುಚ್ಚಲಾಗಿದೆ.
ಚೀನಾದ ಹೆನಾನ್ ಪ್ರಾಂತ್ಯದಲ್ಲಿರುವ ಯುಝೌ ನಗರವು ಸುಮಾರು 12 ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ಇತ್ತೀಚೆಗೆ ಈ ನಗರದಲ್ಲಿ ಮೂರು ಲಕ್ಷಣ ರಹಿತ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆ ರಾತ್ರಿಯಿಂದ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post