ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ತೀರ್ಥ ಸೇವನೆ ವೇಳೆ ಬಾಲಕೃಷ್ಣನ ಲೋಹದ ಮೂರ್ತಿಯನ್ನು ನುಂಗಿರುವ ವಿಲಕ್ಷಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಎಂದಿನಂತೆ ಪೂಜೆ ಮಾಡಿದ ಬಳಿಕ ತೀರ್ಥ ಸೇವಿಸುವ ಸಂದರ್ಭದಲ್ಲಿ ಅಂಗೈನಲ್ಲಿ ಬಾಲಕೃಷ್ಣನ ಮೂರ್ತಿ ಇಟ್ಟುಕೊಂಡಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಾಲಕೃಷ್ಣನ ವಿಗ್ರಹವನ್ನು ನುಂಗಿದ್ದಾರೆ.
ಬಳಿಕ ಆತನಿಗೆ ಗಂಟಲು ನೋವು ಮತ್ತು ಗಂಟಲು ಊತ ಕಂಡುಬಂದಿದ್ದು, ಕೂಡಲೇ ಸ್ಥಳೀಯ ವೈದ್ಯರನ್ನು ಸಂಪರ್ಕಿಸಿದ್ದಾರೆ. ವ್ಯಕ್ತಿಯನ್ನು ಪರಿಶೀಲಿಸಿದ ವೈದರು ಎಕ್ಸ್‌ರೇ ಮಾಡಿಸಲು ಸೂಚಿಸಿದ್ದಾರೆ. ಎಕ್ಸ್‌ರೇ ವರದಿಯಲ್ಲಿ ಬಾಲಕೃಷ್ಣನ ವಿಗ್ರಹ ಗಂಟಲಿನಲ್ಲಿ ಇರುವುದು ಪತ್ತೆಯಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಂತರ ಇಎನ್‌ಟಿ ವಿಭಾಗದ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿ ಗಂಟಲಿನಲ್ಲಿ ಸಿಲುಕಿದ್ದ ಕೃಷ್ಣನ ವಿಗ್ರಹವನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.
Also read: ಇ-ವಿಧಾನ ಯೋಜನೆ ಹೆಸರಲ್ಲಿ 254 ಕೋಟಿ ರೂ. ಹಗರಣ: ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆರೋಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















