ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು, ಇತ್ತೀಚೆಗೆ ಚೆನ್ನೈನಲ್ಲಿ ನಡೆಸ ಸೇನಾ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು. ಇಲ್ಲವಾದಲ್ಲಿ ಪ್ರಪಂಚದಲ್ಲಿ ಅಸಮಾಧಾನ ಹಾಗೆ ಉಳಿಯುತ್ತದೆ. ಕೆಲವರು ಸಿಡಿಎಸ್ ನಿಧನದ ಬಗ್ಗೆ ವಿಕೃತ ಹೇಳಿಕೆ ಟ್ವೀಟ್ ಮಾಡಿದ್ದಾರೆ. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಂಡನೆ ಮಾಡಿದ್ದಾರೆ ಎಂದರು.
ಮಾಜಿ ಸಿಎಂ ಸಿದ್ಧರಾಮಯ್ಯ ಅವರೂ ಇದಕ್ಕೆ ಪೂರಕವಾಗಿ ಮಾತನಾಡಿದ್ದು, ಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು. ಈ ಬಗ್ಗೆ ಸಂಶಯ ಇದೆ. ರಷ್ಯನ್ ನಿರ್ಮಿಸಿದ ಹೆಲಿಕಾಪ್ಟರ್ ಇದಾಗಿದೆ. ಅಪಘಾತದ ಕಾರಣ ಏನು ಎಂಬುವುದು ತಿಳಿಯಬೇಕು ಎಂದು ಸದನದಲ್ಲಿ ಒತ್ತಾಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post