No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಳಗಾವಿಯಲ್ಲಿ ‘ಅಸ್ಮಿತೆ’ ವ್ಯಾಪಾರಮೇಳ-2024 | ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ, ಮಾರಾಟ ಮೇಳ

ಡಿಸೆಂಬರ್‌ 26 ರಿಂದ ಜನವರಿ 4ರವರೆಗೆ ಪ್ರದರ್ಶನ

kalpa News by kalpa News
December 26, 2024
in ಬೆಂಗಳೂರು ನಗರ
0
ಬೆಳಗಾವಿಯಲ್ಲಿ ‘ಅಸ್ಮಿತೆ’ ವ್ಯಾಪಾರಮೇಳ-2024 | ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ, ಮಾರಾಟ ಮೇಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ದುಡಿಯುವ ವರ್ಗಗಳ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರ ಕಾಳಜಿಯ ಮತ್ತೊಂದು ಕುರುಹಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟವನ್ನು ನಾಳೆ (ಡಿ 26) ಮುಖ್ಯಮಂತ್ರಿಗಳೇ ಉದ್ಘಾಟಿಸಲಿದ್ದಾರೆ.‌

“ಅಸ್ಮಿತೆ ವ್ಯಾಪಾರಮೇಳ-2024” ಹೆಸರಿನಲ್ಲಿ ಮುಖ್ಯಮಂತ್ರಿಗಳ ಕನಸು ಮತ್ತು ಕಾಳಜಿಯನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಸಾಕಾರಗೊಳಿಸಿದ್ದಾರೆ.
ಶ್ರಮಿಕ ವರ್ಗದ ಮಹಿಳಾ ಶಕ್ತಿಯನ್ನು ಆರ್ಥಿಕವಾಗಿ ಮೇಲೆತ್ತಬೇಕು ಎನ್ನುವ ಮುಖ್ಯ ಉದ್ದೇಶದೊಂದಿಗೆ ಹಲವಾರು ಯೋಜನೆಗಳನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದೆ. ಈ ನಿಟ್ಟಿನಲ್ಲಿ ಸ್ವ ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್‌ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಬೆಳಗಾವಿಯಲ್ಲಿ ಆಯೋಜಿಸಲಾಗಿದೆ.

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮತ್ತು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಈ ಮೇಳವನ್ನು ಡಿಸೆಂಬರ್‌ 26 ರಿಂದ ಜನವರಿ 4 ರವರೆಗೆ ಆಯೋಜಿಸಲಾಗಿದೆ.

ನಗರ ಹಾಗೂ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳು ಮಾರಾಟ ಮಾಡುತ್ತಿರುವುದರಿಂದ ಹೆಚ್ಚು ಹೆಚ್ಚು ಸಾರ್ವಜನಿಕರು ಈ ಮೇಳದ ಸದುಪಯೋಗವನ್ನು ಪಡೆದುಕೊಂಡು ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳನ್ನು ಖರೀದಿಸಿ, ಹೆಚ್ಚಿನ ವಹಿವಾಟಿನೊಂದಿಗೆ ಅವರ ಆರ್ಥಿಕ ಸಬಲತೆಗೆ ಕೈ ಜೋಡಿಸಲಿದ್ದಾರೆ ಎಂಬ ನಿರೀಕ್ಷೆ ಹೊಂದಲಾಗಿದೆ.

ಮಹಿಳೆಯರ ಉತ್ಪನ್ನಗಳ ಮಾರಾಟಕ್ಕೆ ಹಳ್ಳಿ ಸಂತೆ, ತಾಲ್ಲೂಕು ಮಟ್ಟದಲ್ಲಿ ಮಾಸಿಕ ಸಂತೆ, ಜಿಲ್ಲಾ ವಸ್ತು ಪ್ರದರ್ಶನ ಮಾರಾಟ ಮೇಳ ಹಾಗೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವ ಮೇಳಗಳನ್ನು ಆಯೋಜಿಸುವ ಮೂಲಕ ಮಾರುಕಟ್ಟೆ ಒದಗಿಸಲಾಗುತ್ತಿದೆ.

Also read: ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ | ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮ | ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿಯಲ್ಲಿ ಕಳೆದ 3 ವರ್ಷದಿಂದ ಬೃಹತ್‌ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಪ್ರತಿ ದಿನ ಸಂಜೆ 6.30 ರಿಂದ 9.00 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತದೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ಜಿಲ್ಲೆಯ ಪ್ರಮುಖ ಉತ್ಪನ್ನಗಳನ್ನು ಇಲ್ಲಿ ಪ್ರದರ್ಶಿಸುತ್ತಿದ್ದಾರೆ. ಒಟ್ಟು 150 ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ 10 ಆಹಾರ ಮೇಳದ ಮಳಿಗೆಗಳು ಮತ್ತು 50 ಖಾದಿ ಉತ್ಪನ್ನಗಳ ಮಳಿಗೆಗಳನ್ನು ಒಳಗೊಂಡಿದೆ.

ಈ ಮೇಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಡಿಸೆಂಬರ್‌ 26ರ ಬೆಳಗ್ಗೆ 10.30 ಯಿಂದ ರಾತ್ರಿ 9.30 ರವರೆಗೆ ಪ್ರದರ್ಶನವಿರಲಿದೆ.
ಪ್ರದರ್ಶನಗೊಳ್ಳುವ ಆಕರ್ಷಕ ವಸ್ತುಗಳು

ಚನ್ನಪಟ್ಟಣದ ಮರದ ಗೊಂಬೆಗಳು, ಕೊಪ್ಪಳದ ಕಿನ್ನಾಳ ಆಟದ ಸಾಮಾನುಗಳು, ಮೊಳಕಾಲ್ಮೂರು ಸೀರೆಗಳು, ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ವಿವಿಧ ಅಕರ್ಷಣೆಯ ಬಟ್ಟೆಗಳು, ನಾರಿನ ಉತ್ಪನ್ನದ ಬ್ಯಾಗ್‌ಗಳು, ಮಸಾಲಾ ಉತ್ಪನ್ನಗಳು, ಸಿರಿ ಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ವಿವಿಧ ಬಗೆಯ ಖಾದಿ ಉತ್ಪನ್ನಗಳು, ಬಾಳೆ ನಾರಿನಿಂದ ಉತ್ಪಾದಿಸಿದ ಉತ್ಪನ್ನಗಳು, ಗೃಹಾಲಂಕಾರಿಕ ವಸ್ತುಗಳು, ಆಯುರ್ವೇದ ಔಷಧಿಯುತ ಉತ್ಪನ್ನಗಳು, ಪಾರಂಪರಿಕ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ನವೀನ ವಿನ್ಯಾಸದ ಆಭರಣಗಳು, ಆಹಾರ ಉತ್ಪನ್ನಗಳು.

ಅಕ್ಕ ಕೆಫೆ ಮಾದರಿ

ಸರ್ಕಾರವು 2024-25ನೇಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ 50 ಅಕ್ಕ ಕೆಫೆಗಳನ್ನು ಒಂದೇ ಮಾದರಿ ವಿನ್ಯಾಸದಡಿ ಅನುಷ್ಠಾನಗೊಳಿಸಲಾಗುತ್ತಿದೆ. 1200 ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸಲಾಗುತ್ತಿದೆ. ಅಕ್ಕ-ಕೆಫೆ ಕಾರ್ಯಕ್ರಮದ ಭಾಗವಾಗಿ ಈ ಮೇಳದ ಮೈದಾನದಲ್ಲಿನ ಆಹಾರ ಕೋರ್ಟ್‌ ಅನ್ನು “ಅಕ್ಕ-ಕೆಫೆ” ಶೀರ್ಷಿಕೆಯಡಿ ಆಕರ್ಷೀಣೀಯವಾಗಿ ಆಯೋಜಿಸಲಾಗುತ್ತಿದೆ.

ಬಾಯಲ್ಲಿ ನೀರೂರಿಸುವ ಆಹಾರ

ಆಹಾರ ಮಳಿಗೆಗಳಲ್ಲಿ ಉತ್ತರ ಕರ್ನಾಟಕದ ಗಿರ್ಮಿಟ್‌/ಮಂಡಕ್ಕಿ, ಮೆಣಸಿನಕಾಯಿ ಬಜ್ಜಿ, ಜೋಳದ ಖಡಕ್‌ ರೊಟ್ಟಿ, ಹೋಳಿಗೆ, ಮಂಗಳೂರ ನೀರ್‌ ದೋಸೆ ಮತ್ತು ಮಾಂಸಹಾರಿ ಆಹಾರಗಳಾದ ಬ್ಯಾಂಬು ಬಿರಿಯಾನಿ ಮುಂತಾದವುಗಳು ಲಭ್ಯವಿರಲಿದೆ.

ಇಲಾಖೆಯ ಸಾಧನೆಗಳು

  • ಬೆಳಗಾವಿ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ “ಅಕ್ಕ ಕೆಫೆ” ಯನ್ನು ಉದ್ಘಾಟಿಸಲಾಗಿದೆ.
  • ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್ನಿನ ಮಹಿಳಾ ಸ್ವ ಸಹಾಯ ಗುಂಪಿನ ಉತ್ಪನ್ನಗಳ ಮಳಿಗೆಯನ್ನು ಆರಂಭಿಸಲಾಗಿದೆ.
  • ರಾಜ್ಯದಲ್ಲಿ 2.79 ಲಕ್ಷ ಸ್ವ-ಸಹಾಯ ಗುಂಪುಗಳಡಿ 29.66 ಲಕ್ಷ ಕುಟುಂಬಗಳನ್ನು ಗ್ರಾಮೀಣ ಹಾಗೂ ನಗರ ಜೀವನೋಪಾಯ ಅಭಿಯಾನದಡಿ ಹಾಗೂ 45 ಸಾವಿರ ಸ್ವ-ಸಹಾಯ ಗುಂಪುಗಳಡಿ, 4.50 ಲಕ್ಷ ಕುಟುಂಬಗಳನ್ನು ನಗರ ಅಭಿಯಾನದಡಿ ಸಂಘಟಿಸಲಾಗಿದೆ.
  • ಪ್ರತಿಯೊಬ್ಬ ಮಹಿಳೆಯು ಸ್ವಾವಲಂಬನೆಯ ಬದುಕಿನೊಂದಿಗೆ ಕುಟುಂಬದ ಅಭಿವೃದ್ಧಿಗೆ ಸಹಕರಿಸಲು ಈ ಅವಕಾಶ ಕಲ್ಪಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: BelagaviCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ | ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮ | ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟ | ವಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ

kalpa News

kalpa News

Next Post
ರಾಜ್ಯದಲ್ಲಿ ಲವ್ ಜಿಹಾದ್ ಹೆಚ್ಚಳ, ಕೇರಳದಲ್ಲಿ ಯುವಕರಿಗೆ ತರಬೇತಿ: ಆರ್. ಅಶೋಕ್

ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟ | ವಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL