ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಬೆಳಗಾವಿಯಲ್ಲಿ ಸಧ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಪುಂಡರಿಗೆ ಪೊಲೀಸರು ತಕ್ಕ ಶಿಕ್ಷೆ ನೀಡಿದ್ದಾರೆ. ಹಾಗೂ ಈಗಾಗಲೇ 27 ಮಂದಿಯನ್ನು ಬಂಧಿಸಿ, ಹಲವರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಕನ್ನಡಪರ ಹೋರಾಟಗಾರರು ಇಂದು ಕೂಡ ಹೋರಾಟ ಮುಂದುವರಿಸಿದ್ದು, ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದ ಘಟನೆ ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಕಪ್ಪುಮಸಿ ಬಳಿದಿರುವ ದುಷ್ಕೃತ್ಯಗಳೀಗೆ ಪ್ರತಿಯಾಗಿ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕಿಯರು ಹಾಗೂ ಬಿಜೆಪಿ ಮುಖಂಡ ಕಿರಣ್ ಜಾಧವ್ ಸೇರಿದಂತೆ ಅನೇಕರು ಶಹಾಪುರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕ್ಷೀರಾಭಿಷೇಕ ಮಾಡಿದರು.
ನಿಷೇಧಾಜ್ಞೆ ಮುಂದುವರಿಕೆ:
ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿರುವುದರಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಮುಂದುವರಿಸಿ ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post