No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Sunday, August 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಬರಿಗಾಲಿನಲ್ಲಿ ಸಂಚರಿಸಿದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ!

ಅತಿವೃಷ್ಟಿ ಹಾನಿ ಪರಿಶೀಲನೆ - 24 ಗಂಟೆಗಳಲ್ಲಿ ಪರಿಹಾರ ವಿತರಣೆಗೆ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

kalpa News by kalpa News
August 10, 2022
in ಬೆಳಗಾವಿ
0
ಬರಿಗಾಲಿನಲ್ಲಿ ಸಂಚರಿಸಿದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಳೆಯ ನಡುವೆಯೂ ನಗರದ ವಿವಿಧ ಪ್ರದೇಶಗಳಲ್ಲಿ ಮಿಂಚಿನ ಸಂಚಾರ ಕೈಗೊಂಡು ಹಾನಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ DC Nitesh Patil ಅವರು, ನೀರು ನುಗ್ಗಿದ ಮನೆಗಳಿಗೆ 24 ಗಂಟೆಗಳಲ್ಲಿ ತಲಾ ಹತ್ತು ಸಾವಿರ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು.

ಯಳ್ಳೂರ ರಸ್ತೆಯ ಕೇಶವ ನಗರ, ಭಾರತ ನಗರ, ಅನಗೋಳದ ರಘುನಾಥ ಪೇಟ ಮತ್ತಿತರ ಕಡೆಗಳಲ್ಲಿ ಸಂಚರಿಸಿದ ಅವರು, ಯಾವುದೇ ಕಾರಕ್ಕೂ ಪರಿಹಾರ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ ಹಾಗೂ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಳೆಯ ಮನೆಗಳು ಕುಸಿಯುವ ಸಂಭವವಿದ್ದರೆ ಅಂತಹ ಮನೆಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮವಾಗಿ ಜನರನ್ನು ಸ್ಥಳಾಂತರಿಸಬೇಕು ಎಂದು ಅಧಿಕಾರಗಳಿಗೆ ತಿಳಿಸಿದರು.

ಯಳ್ಳೂರ ರಸ್ತೆಯ ಕೇಶವ ನಗರದಲ್ಲಿರುವ ಅನ್ನಪೂರ್ಣೇಶ್ವರಿ ಮಂಗಲ ಕಾರ್ಯಾಲಯಕ್ಕೆ ಭೇಟಿ ನೀಡಿದ ಅವರು, ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರ ಸ್ಥಾಪನೆ ಕುರಿತು ಅಧಿಕಾರಿಗಳ ಜತೆ ಚರ್ಚಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, “ಅತಿವೃಷ್ಟಿಯಿಂದ ನಗರದಲ್ಲಿ 10 ಕ್ಕಿಂತ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, 4 ಮನೆಗಳು‌ ಸಂಪೂರ್ಣವಾಗಿ ಕುಸಿದಿವೆ. ನೀರು ನುಗ್ಗಿರುವ ಮನೆಗಳಿಗೆ 24 ಗಂಟೆಗಳಲ್ಲಿ ಪರಿಹಾರ ನೀಡಲಾಗುವುದು” ಎಂದು ತಿಳಿಸಿದರು.

ಅದೇ ರೀತಿ ಮನೆ ಸಂಪೂರ್ಣವಾಗಿ ಕುಸಿದಿರುವುದನ್ನು ಪರಿಶೀಲಿಸಿ 48 ಗಂಟೆಗಳಲ್ಲಿ ಪರಿಹಾರ ನೀಡಲಾಗುವುದು. ಈ ನಿಟ್ಟಿನಲ್ಲಿ ತ್ವರಿತವಾಗಿ ಸಮೀಕ್ಷೆ ಪೂರ್ಣಗೊಳಿಸಿ, ದಾಖಲೆಗಳನ್ನು ಆಧರಿಸಿ ಪರಿಹಾರ ನೀಡಲಾಗುತ್ತದೆ ಎಂದರು.
ಬಳ್ಳಾರಿ ನಾಲಾ ಸಮಸ್ಯೆ-ಶಾಶ್ವತ ಪರಿಹಾರಕ್ಕೆ ಸಭೆ:
ಬಳ್ಳಾರಿ ನಾಲಾದಿಂದ ನಗರದಲ್ಲಿ ಪ್ರತಿವರ್ಷ ಸಮಸ್ಯೆ ಎದುರಾಗುತ್ತಿರುವುದರಿಂದ ಇದಕ್ಜೆ ಶಾಶ್ವತ ಪರಿಹಾರ ಕಂಡುಹಿಡಿಯಲು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸದ್ಯದಲ್ಲೇ ಸಭೆಯನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಸದ್ಯಕ್ಕೆ ತಾತ್ಕಾಲಿಕವಾಗಿ ಸಮಸ್ಯೆ ನಿವಾರಿಸಲು ಐದು ಕೋಟಿ‌ ರೂಪಾಯಿ ವೆಚ್ಚದಲ್ಲಿ ಡ್ರೈನೇಜ್ ಕಾಮಗಾರಿಯನ್ನು ತೆಗೆದುಕೊಳ್ಳಲಾಗುವುದು. ಬಳ್ಳಾರಿ ನಾಲಾ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುವುದು ಎಂದರು.
ಬರಿಗಾಲಿನಲ್ಲಿ ಸಂಚರಿಸಿದ ಜಿಲ್ಲಾಧಿಕಾರಿ!:
ಯಳ್ಳೂರ ರಸ್ತೆಯ ಕೇಶವ ನಗರದಲ್ಲಿ ಮಳೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಲು ಕೆಲವೆಡೆ ಬರಿಗಾಲಿನಲ್ಲೆ ತೆರಳಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಗಟಾರು ಸಮಸ್ಯೆಗಳನ್ನು ಪರಿಶೀಲಿಸಿದರು.

ಭಾರತ ನಗರದಲ್ಲಿ ಮನೆಯೊಂದು ಸಂಪೂರ್ಣವಾಗಿ ಕುಸಿದಿರುವ ಮನೆಯನ್ನು ಪರಿಶೀಲಿಸಿದ ಅವರು, ಹಾನಿಯ ಬಗ್ಗೆ ಸ್ಥಳೀಯ ನಿವಾಸಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.

ಅಕ್ಕಪಕ್ಕದ ಮನೆಗಳ ಗೋಡೆ ಕುಸಿದಿರುವುದರಿಂದ ಯಾವುದೇ ಕ್ಷಣ ಮನೆಗಳು ಕುಸಿಯುವ ಸಾಧ್ಯತೆ ಇರುವುದರಿಂದ ಕೂಡಲೇ ಪರಿಹಾರವನ್ನು ನೀಡಬೇಕು. ಪರ್ಯಾಯ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಮನೆಯನ್ನು ಕಳೆದುಕೊಂಡಿರುವ ಕುಟುಂಬದ ಸದಸ್ಯರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಹಾನಿಯನ್ನು ಪರಿಶೀಲಿಸಿ ನಿಯಮಾವಳಿ ಪ್ರಕಾರ ತಕ್ಷಣವೇ ಪರಿಹಾರವನ್ನು ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ತಹಶಿಲ್ದಾರ ಹಾಗೂ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾಖಲೆಗಳನ್ನು ಪರಿಶೀಲಿಸಿ ಕೂಡಲೇ ಪರಿಹಾರ ಆರ್.ಟಿ.ಜಿ.ಎಸ್.‌ಮಾಡಲು ತಹಶೀಲ್ದಾರರಿಗೆ ಸೂಚನೆ. ಕೆಲವೇ ಗಂಟೆಗಳಲ್ಲಿ ಪರಿಹಾರ ಒದಗಿಸಲು ನಿರ್ದೇಶನ ನೀಡಿದರು.
ಮನೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಓಮ್ನಿ ವಾಹನ ಸಂಪೂರ್ಣ ಜಖಂ ಗೊಂಡಿರುವುದರಿಂದ ಪರಿಹಾರ ನೀಡಲು ವಾಹನದ ಮಾಲೀಕರು ಮನವಿ ಮಾಡಿಕೊಂಡರು.

ದಾಖಲೆಗಳನ್ನು ಒದಗಿಸಿದರೆ ಅದಕ್ಕೂ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಭೇಟಿಯ ಸಂದರ್ಭದಲ್ಲಿ ಕೆಲವು ಕಡೆಗಳಲ್ಲಿ ಕಸದರಾಶಿ ಹಾಗೂ ಗಟಾರುಗಳನ್ನು ಲೆಕ್ಕಿಸದೇ ಕೆಲವೆಡೆ ಬರಿಗಾಲಿನಲ್ಲಿಯೇ ಸಂಚರಿಸಿದ ಜಿಲ್ಲಾಧಿಕಾರಿಗಳು, ಮನೆ ಶಿಥಿಲಗೊಂಡಿದ್ದರೆ ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಗೊಳ್ಳಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿಕೊಂಡರು.

ಅನಗೋಳದ ರಘುನಾಥ ಪೇಟದಲ್ಲಿ ಮನೆಯ ಗೋಡೆ ಕುಸಿದಿರುವುದನ್ನು ವೀಕ್ಷಿಸಿದರು. ಈ ಬಗ್ಗೆ ಕುಟುಂಬದ ಸದಸ್ಯರ ಜತೆ ಚರ್ಚೆ ನಡೆಸಿದ ಅವರು, ತಕ್ಷಣವೇ ಮನೆಯನ್ನು ಖಾಲಿ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು.

Also read: ದಾವಣಗೆರೆ-ಹದಡಿ ಕೆರೆ ಏರಿ ದುರಸ್ತಿಗೆ 1.70 ಕೋಟಿ ಮಂಜೂರು: ಸಚಿವ ಬಿ.ಎ. ಬಸವರಾಜು

ಹಾನಿಗೊಳಗಾಗಿರುವುದರಿಂದ ಇಂದೇ ತಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಆದ್ದರಿಂದ ಕೂಡಲೇ ಸ್ಥಳಾಂತರಗೊಳ್ಳಬೇಕು. ಒಂದು ವೇಳೆ ಬಾಡಿಗೆದಾರರಿದ್ದರೇ ಅವರನ್ನು ಸ್ಥಳಾಂತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾನಿಗೊಳಗಾದ ಮನೆಯಲ್ಲಿ ಬಾಡಿಗೆದಾರರಿದ್ದರೆ ನಿಯಮಾವಳಿ ಪ್ರಕಾರ ಅವರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಯಳ್ಳೂರ ರಸ್ತೆಯ ಕೇಶವ ನಗರದಲ್ಲಿ ಸಮಸ್ಯೆಯನ್ನು ವಿವರಿಸಿದ ಪಾಲಿಕೆಯ ಸದಸ್ಯರಾದ ಸರಿತಾ ಪಾಟೀಲ ಅವರು, ಬಡಾವಣೆಯಲ್ಲಿ ಗಟಾರು ಇಲ್ಲದಿರುವುದರಿಂದ ನೀರು ಹರಿಯಲು ಸಾಧ್ಯವಾಗುತ್ತಿಲ್ಲ. ‌ಇದರಿಂದ ಸಮಸ್ಯೆ ಉದ್ಭವಿಸುತ್ತಿದೆ” ಎಂದು ತಿಳಿಸಿದರು.

ವಡಗಾವಿಯ ಅನ್ನಪೂರ್ಣೇಶ್ವರಿ ಮಂಗಲ‌ ಕಾರ್ಯಾಲಯವನ್ನು ಕಾಳಜಿ ಕೇಂದ್ರವಾಗಿ ಸ್ಥಾಪಿಸುವ ಕುರಿತು ಪಾಲಿಕೆಯ ಅಧಿಕಾರಿಗಳ ಜತೆ ಚರ್ಚಿಸಿದರು.

ಅತಿವೃಷ್ಟಿಯಿಂದ ಬೆಳೆಹಾನಿ-ಶೀಘ್ರ ಪರಿಹಾರ:
ಕೃಷ್ಣಾ ಹಾಗೂ ಮಲಪ್ರಭಾ ನದಿಪಾತ್ರದಲ್ಲಿ ಸದ್ಯಕ್ಜೆ ಪ್ರವಾಹ ಪರಿಸ್ಥಿತಿ ಇರುವುದಿಲ್ಲ. ಆದಾಗ್ಯೂ ಕೆಲವು ಕಡೆಗಳಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಯಾಗಿದ್ದು, ಆದಷ್ಟು ಬೇಗನೇ ಸಮೀಕ್ಷೆ ಕೈಗೊಂಡು ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಒಟ್ಟಾರೆ 388 ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅದೇ ರೀತಿ ಪಾಲಿಕೆಯ ವ್ಯಾಪ್ತಿಯಲ್ಲಿ ಸದ್ಯಕ್ಕೆ ಒಂದು ಕಾಳಜಿ ಕೇಂದ್ರವನ್ನು ಗುರುತಿಸಲಾಗಿದೆ. ಪರಿಸ್ಥಿತಿ ಆಧರಿಸಿ ಹೆಚ್ಚುವರಿ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ತಹಶೀಲ್ದಾರ ಆರ್.ಕೆ.ಕುಲಕರ್ಣಿ, ಪಾಲಿಕೆಯ ಉಪ ಆಯುಕ್ತರಾದ ಭಾಗ್ಯಶ್ರೀ ಹುಗ್ಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviDC Nitesh PatilKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಜಿಲ್ಲಾಧಿಕಾರಿ ನಿತೇಶ್ ಪಾಟೀಲಬೆಳಗಾವಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಾವಣಗೆರೆ-ಹದಡಿ ಕೆರೆ ಏರಿ ದುರಸ್ತಿಗೆ 1.70 ಕೋಟಿ ಮಂಜೂರು: ಸಚಿವ ಬಿ.ಎ. ಬಸವರಾಜು

Next Post

75 ನೇ ಸ್ವಾತಂತ್ರೋತ್ಸವ ಅಂಗವಾಗಿ ವನ ಮಹೋತ್ಸವ, ಆರೋಗ್ಯ ತಪಾಸಣೆ ಕಾರ್ಯಕ್ರಮ

kalpa News

kalpa News

Next Post
75 ನೇ ಸ್ವಾತಂತ್ರೋತ್ಸವ ಅಂಗವಾಗಿ ವನ ಮಹೋತ್ಸವ, ಆರೋಗ್ಯ ತಪಾಸಣೆ ಕಾರ್ಯಕ್ರಮ

75 ನೇ ಸ್ವಾತಂತ್ರೋತ್ಸವ ಅಂಗವಾಗಿ ವನ ಮಹೋತ್ಸವ, ಆರೋಗ್ಯ ತಪಾಸಣೆ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL