ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಪ್ರೀತಿಸಿದ ಹುಡುಗಿಯ ಮದುವೆಗೆ ವಿರೋಧಿಸಿದ್ದ ಪೋಷಕರು ಹಾಗೂ ಮಗನ ನಡುವೆ ಮಾತಿನ ಚಕಮಕಿ ನಡೆದು ತಂದೆಯೇ ಮಗನನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ ನಾಗಪ್ಪ ಉಳ್ಳಾಗಡ್ಡಿ (25) ಕೊಲೆಯಾದವರು. ಅವರ ತಂದೆ ನಾಗಪ್ಪ ಉಳ್ಳಾಗಡ್ಡಿ (68) ಹಾಗೂ ಹಿರಿಯ ಸಹೋದರ ಗುರುಬಸಪ್ಪ ಉಳ್ಳಾಗಡ್ಡಿ (28) ಅವರನ್ನು ಹತ್ಯೆ ಮಾಡಿರುವ ಆರೋಪದ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.
Also read: ನಟಿ ರನ್ಯಾ ರಾವ್’ಗೆ ರಾಜಕೀಯ ನಾಯಕರ ಜತೆ ನಂಟು | ಕೆಐಎಡಿಬಿ 12 ಎಕರೆ ಭೂಮಿ ಮಂಜೂರು
ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಹುಡುಗಿಯೋರ್ವಳನ್ನು ಮಂಜುನಾಥ ಪ್ರೀತಿಸುತ್ತಿದ್ದ. ಇದಕ್ಕೆ ಮನೆಯವರ ಒಪ್ಪಿಗೆ ಇರಲಿಲ್ಲ. ಹಾಗಾಗಿ ಪೋಷಕರೊಂದಿಗೆ ವಾಗ್ವಾದ ನಡೆದಿದೆ. ಆಗ ಹಿರಿಯ ಸಹೋದರ ಗುರುಬಸಪ್ಪ ಕಲ್ಲಿನಿಂದ ತಮ್ಮನ ತಲೆಗೆ ಹೊಡೆದಿದ್ದಾನೆ, ಇದೇ ಸಂದರ್ಭದಲ್ಲಿ ತಂದೆಯೂ ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದು, ತಲೆಗೆ ತೀವ್ರ ಪೆಟ್ಟು ತಗುಲಿ ಮಂಜುನಾಥ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post