ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ತಹಶೀಲ್ದಾರ್ ಕಚೇರಿ ದ್ವಿತೀಯ ದರ್ಜೆ ಸಹಾಯಕ ಕಚೇರಿಯಲ್ಲೇ ಆತ್ಮಹತ್ಯೆ #Suicide in Tahasildhar Office ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ರುದ್ರಣ್ಣ ಯಡವಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎನ್ನಲಾಗಿದ್ದು, ಏಕಾಏಕಿ ವರ್ಗಾವಣೆ ಮಾಡಿದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
Also read: ಉಪಚುನಾವಣೆ ಹಿನ್ನಲೆ ವಕ್ಫ್ ವಿವಾದ ರಾಜಕಾರಣಗೊಳಿಸಲು ಯತ್ನ: ಹೆಚ್.ಸಿ. ಯೋಗೀಶ್
ರುದ್ರಣ್ಣ ಯಡವಣ್ಣ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಗಳು, ನಿನ್ನೆ ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ಎಲ್ಲಮ್ಮ ಆಡಳಿತ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು. ವರ್ಗಾವಣೆ ರದ್ದುಗೊಳಿಸುವಂತೆ ತಹಶೀಲ್ದಾರ್ ಹಾಗೂ ಡಿಸಿ ಮೊಹಮ್ಮದ್ ರೋಷನ್ ಅವರಿಗೆ ರುದ್ರಣ್ಣ ಮನವಿ ಮಾಡಿದ್ದರು. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಚೇರಿಗೂ ಹೋಗಿ ಅಳಲು ತೋಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post