ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ #Minister Lakshmi Hebbalkar ಅವರ ಕಾರು ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದ್ದು, ಆರಂಭದಲ್ಲಿ ತಾನು ನೀಡಿದ್ದ ಹೇಳಿಕೆಯನ್ನು ಕಾರು ಚಾಲಕ ಬದಲಾಯಿಸಿದ್ದು, ಇದರ ಆಧಾರದಲ್ಲಿ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದೆ.
ಈ ಕುರಿತಂತೆ ಬೆಳಗಾವಿ ಎಸ್’ಪಿ ಡಾ.ಭೀಮಾಶಂಕರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ಸಚಿವರ ಕಾರಿಗೆ ಕ್ಯಾಂಟರ್’ವೊಂದು ಡಿಕ್ಕಿ ಹೊಡಿದ ವಿಚಾರ ತಿಳಿದುಬಂದಿದ್ದು, ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಘಟನೆ ನಡೆದ ಆರಂಭದಲ್ಲಿ, ರಸ್ತೆ ದಾಟುತ್ತಿದ್ದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸುವಾಗ ಅಪಘಾತ ಸಂಭವಿಸಿದೆ ಎಂದು ಚಾಲಕ ಹೇಳಿಕೊಂಡಿದ್ದ. ಆದರೆ, ಕ್ಯಾಂಟರ್’ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಸ್ಥಳದಿಂದ ಪರಾರಿಯಾಗಿರುವುದು ಹೆಚ್ಚಿನ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ.
Also read: ನಟ ಸೈಫ್ ಅಲಿ ಖಾನ್’ಗೆ ಚಾಕು ಇರಿತ | ಆಸ್ಪತ್ರೆಗೆ ದಾಖಲು | ಕೃತ್ಯಕ್ಕೆ ಕಾರಣವೇನು?
ಡಿಕ್ಕಿ ಕ್ಯಾಂಟರ್ ಚಾಲಕ ಪರಾರಿಯಾಗಿರುವುದರಿಂದ ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕ್ಯಾಂಟರ್ ಮತ್ತು ಚಾಲಕನ ಪತ್ತೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ವರದಿಯಾಗಿದೆ.
ಏನಿದು ಘಟನೆ?
ಕಳೆದ ಮಂಗಳವಾರ ಮುಂಜಾನೆ ಬೆಳಗಾವಿ ಬಳಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಸಚಿವರ ಸಹೋದರ ಎಂಎಲ್’ಸಿ ಚನ್ನರಾಜ್ ಹಟ್ಟಿಹೊಳಿ, ಗನ್ ಮ್ಯಾನ್ ಹಾಗೂ ಚಾಲಕನಿಗೆ ಗಾಯಗಳಾಗಿತ್ತು.
ಬೆಳಗ್ಗೆ 5 ಗಂಟೆಗೆ ಅಂಬಡಗಟ್ಟಿ ಕ್ರಾಸ್ ಬಳಿ ಒಂದು ಕಂಟೇನರ್ ಟ್ರಕ್ ಬಲಗಡೆಯಿಂದ ಎಡಗಡೆಗೆ ಬಂದಿದೆ. ಈ ವೇಳೆ ಇವರ ಕಾರಿನ ಬಲಭಾಗಕ್ಕೆ ತಾಗಿದೆ. ಅದರಿಂದ ಮುಂದೆ ಆಗಲಿದ್ದ ಹೆಚ್ಚಿನ ಅನಾಹುತ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ, ಸರ್ವೀಸ್ ರಸ್ತೆಗಿಳಿದು ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post