ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿದರು.

ನಂತರ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಎರಡನೇ ಹಂತದ ಕಟ್ಟಡವನ್ನು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಸಿ.ಎಂ. ಅಶ್ವಥ್ ನಾರಾಯಣ, ಶಶಿಕಲಾ ಜೊಲ್ಲೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಮಹಾಂತೇಶ ಕವಟಗಿಮಠ, ಅರುಣ ಶಾಹಪೂರ, ಹನಮಂತ ನಿರಾಣಿ, ವಿಧಾನಪರಿಷತ್ ಚುನಾವಣೆಯಲ್ಲಿ ಜಯಶಾಲಿಯಾಗಿರುವ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















