No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Tuesday, April 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಸಿಎಂ ಆದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 16, 2021
in ಬೆಳಗಾವಿ
0
ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಸಿಎಂ ಆದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಶೌರ್ಯ ಹಾಗೂ ಶೌರ್ಯೇತರ ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಅವರು ಇಂದು ಬೆಳಗಾವಿಯಲ್ಲಿ ವಿಜಯ್ ದಿವಸ್ ಅಂಗವಾಗಿ ಮುಖ್ಯಮಂತ್ರಿ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ ನ ತರಬೇತಿ ಶಾಲೆಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದ ನಂತರ ಮಾತನಾಡುತ್ತಿದ್ದರು.

ಪರಮವೀರಚಕ್ರ ಪಡೆದವರಿಗೆ 25 ಲಕ್ಷದಿಂದ 1.5 ಕೋಟಿ ರೂ.ಗಳಿಗೆ, ಮಹಾವೀರಚಕ್ರ ವಿಜೇತರಿಗೆ 12 ಲಕ್ಷಕ್ಕೆ ಬದಲಾಗಿ 1.00 ಕೋಟಿ ರೂ.ಗಳು, ಅಶೋಕ ಚಕ್ರ ಪಡೆ ದವರಿಗೆ 25 ಲಕ್ಷ.ರೂಗಳಿಗೆ ಬದಲಾಗಿ 1.5 ಕೋಟಿ ರೂ.ಗಳು, ಕೀರ್ತಿ ಚಕ್ರ ಪಡೆವರಿಗೆ 1.00 ಕೋಟಿ ರೂ.ಗಳು, ವೀರಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು, ಶೌರ್ಯ ಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು, ಸೇನಾ/ನೌಕಾ/ ವಾಯು ಸೇನಾ ಮೇಡಲ್ ಪಡೆದವರಿಗೆ 15 ಲಕ್ಷ ರೂ.ಗಳು, ಮೆನ್ ಶನ್ ಎನ್.ಡಿ.ಎಸ್ ಪ್ಯಾಚ್ ಪಡೆದವರಿಗೆ 15 ಲಕ್ಷ ರೂ.ಗಳಿಗೆ ಹೆಚ್ಚಿಸಿ ಆದೇಶವನ್ನು ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಪ್ರಶಸ್ತಿ ವಿಜೇತರಿಗೆ ಸುಮಾರು ಐದು ಪಟ್ಟು ಅನುದಾನವನ್ನು ಹೆಚ್ವಿಸಲಾಗಿದೆ. ಅವರ ಬಹಳ ವರ್ಷಗಳ ಬೇಡಿಕೆಯನ್ನು ಈಡೇರಿಸಿ ಆದೇಶವನ್ನು ಹೊರಡಿಸಿದೆ. ಇದು ಸೇನೆಗೆ ನಾವು ಸಲ್ಲಿಸುವ ಗೌರವ. ನಿವೃತ್ತ ರಾದ ಮೇಲೆ ಉತ್ತಮ ಜೀವನ ನಡೆಸಲು ಹಾಗೂ ಸಾವನ್ನಪ್ಪಿದಾಗ ಸಹಾಯ ಮಾಡುತ್ತಾ ಬಂದಿದ್ದೇವೆ. ಪ್ರಶಸ್ತಿ ಪಡೆದಾಗಲು ಅವರನ್ನು ಗೌರವಿಸುವ ನಿಟ್ಟಿನಲ್ಲಿ ಅನುದಾನವನ್ನು ಹೆಚ್ವಿಸಲಾಗಿದೆ ಎಂದರು.

ದೇಶದ ತಾಂತ್ರಿಕ ಅಭಿವೃದ್ಧಿಗೆ ಸೇನಾಪಡೆಗಳ ಕೊಡುಗೆ:
ಸೇನಾಪಡೆಗಳು ದೇಶದ ರಕ್ಷಣೆ ಮಾತ್ರವಲ್ಲದೆ ಆಂತರಿಕ ಭದ್ರತೆಯನ್ನು ಕಾಪಾಡುವಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ. ದೇಶದ ತಾಂತ್ರಿಕ ಬೆಳವಣಿಗೆ ಯಲ್ಲಿಯೂ ಸೇನಾಪಡೆಗಳು ಪ್ರಮುಖವಾದ ಪಾತ್ರವನ್ನು ನಿರ್ವಹಿಸುತ್ತವೆ. ಸೇನೆಯ ಬಗ್ಗೆ ನಮಗೆ ಅತ್ಯಂತ ಹೆಮ್ಮೆ ಇದೆ. ಪ್ರತಿ ಬಾರಿಯೂ ಗಡಿಯುದ್ದಕ್ಕೂ ಅವರು ಸವಾಲುಗಳನ್ನು ಎದುರಿಸುತ್ತಾರೆ ಪೂರ್ವ , ಪಶ್ಚಿಮ, ಉತ್ತರ ಗಡಿಗಳಾಗಲಿ, ಅವರಿಗೆ ಎದುರಾದ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ, ಶತ್ರುಪಡೆಗಳನ್ನು ಸೋಲಿಸಿದ್ದಾರೆ.

ವಿಶೇಷವಾಗಿ 1971 ರಲ್ಲಿ ನಡೆದ ಇಂಡೋ- ಪಾಕಿಸ್ತಾನ ಯುದ್ಧವು ನಮ್ಮ ಸೇನಾಪಡೆಯ ಶಕ್ತಿ, ಬುದ್ದಿವಂತಿಕೆ, ಶೌರ್ಯ ಹಾಗೂ ಮೂರು ರಕ್ಷಣಾ ಪಡೆಗಳ ನಡುವಿನ ಸಮನ್ವಯಕ್ಕೆ ಸಾಕ್ಷಿಯಾಗಿದೆ ಎಂದರು.

ಮಧ್ಯರಾತ್ರಿ ನಡೆದ ದಾಳಿಗೆ ವಾಯುಪಡೆ, ನೌಕಾ, ಸೇನಾ ಪಡೆಗಳು ಎಚ್ಚೆತ್ತು ಯುದ್ಧಕ್ಕೆ ಪ್ರತ್ಯುತ್ತರ ನೀಡಿತು. 13 ದಿನಗಳ ಕಾಲ ನಡೆದ ಯುದ್ಧದಲ್ಲಿ 3863 ಯೋಧರು ಸಾವಿಗೀಡಾಗಿ, 9000 ಕ್ಕೂ ಹೆಚ್ಚು ಯೋಧರು ಗಾಯಾಳುಗಳಾದರು. ಪಾಕಿಸ್ತಾನದ 90000 ಕ್ಕೂ ಹೆಚ್ವು ಸೈನಿಕರು ಶರಣಾಗಿ, ಭಾರತ ಜಯ ಗಳಿಸಿತು. ಇದು ಅತ್ಯುತ್ತಮ ಯುದ್ಧ ನಿರ್ವಹಣೆ ಯ ಪ್ರತೀಕ ಎಂದರು.

1971 ರಲ್ಲಿ ಭಾರತದ ಮಿಲಿಟರಿ ಶಕ್ತಿಯನ್ನು ಇಡೀ ವಿಶ್ವವೇ ತಿರುಗಿ ನೋಡುವಂತಾಯಿತು. ಯುದ್ಧದಲ್ಲಿ ಮಡಿದವರ ಶೌರ್ಯಕ್ಕೆ ಮುಖ್ಯಮಂತ್ರಿಗಳು ನಮನ ಸಲ್ಲಿಸುವುದು ನಮ್ಮ ಕರ್ತವ್ಯ ಎಂದರು.

ಮಿಲಿಟರಿಯಲ್ಲಿ ತಂತ್ರಜ್ಞಾನ ಬಳಕೆ:
ಇತ್ತೀಚೆಗೆ ವಿಶ್ವದಲ್ಲಿ ತಂತ್ರಜ್ಞಾನ ಬಳಕೆ ಮಿಲಿಟರಿಯಲ್ಲಿ ಹೆಚ್ಚಾಗಿದೆ. ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಭಾರತವೂ ಯಾವ ದೇಶಕ್ಕೂ ಕಡಿಮೆಯಿಲ್ಲ. ನಮ್ಮ ಪ್ರಧಾನಿಗಳೂ ಸಹ ಈ ನಿಟ್ಟಿನಲ್ಲಿ ಭಾರತವನ್ನು ಸಶಕ್ತಗೊಳಿಸಿದ್ದಾರೆ.

ವಿಜಯ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಹೆಮ್ಮೆಯ ಸಂಗತಿಯಾಗಿದೆ. ಬಾಂಗ್ಲಾದೇಶವೂ ತನ್ನ ಸ್ವಾತಂತ್ರ್ಯ ದಿನವನ್ನು ಆಚರಿಸಿಕೊಳ್ಳಲು ಸಾಧ್ಯ ವಾಗಿರುವುದು ಭಾರತದ ಸೇನೆಯ ಸಹಾಯದಿಂದಾಗಿ. ನಮ್ಮನ್ನು ದೇಶದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಅಭಿವೃದ್ಧಿಗೆ ಮುಡಿಪಾಗಿಟ್ಟುಕೊಳ್ಳಬೇಕು. ಅದುವೇ ನಾವು ಸೇನಾಪಡೆಗಳಿಗೆ ಸಲ್ಲಿಸುವ ನಿಜ ನಮನ ಎಂದರು.

ಇದೇ ಸಂದರ್ಭದಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಇತ್ತೀಚೆಗೆ ಮಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಎಲ್ಲರಿಗೂ ಶ್ರದ್ದಾಂಜಲಿ ಸಲ್ಲಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಮೇಜರ್ ಜನರಲ್ ಜೆ.ವಿ. ಪ್ರಸಾದ್ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviBipin RawatCM Basavaraja BommaiHome Minister Araga GnanendraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState NewsVijay Divasಗೃಹ ಸಚಿವ ಆರಗ ಜ್ಞಾನೇಂದ್ರಬಿಪಿನ್ ರಾವತ್ಬೆಳಗಾವಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವಿಜಯ ದಿವಸ್
Share197Tweet123Send
Previous Post

ಅಂತರ್ಜಾಲದ ಅಸತ್ವವನ್ನು ದೂರವಿಡಲು ಪೋಷಕರು, ಶಿಕ್ಷಕರ ಜವಾಬ್ಧಾರಿ ಅಗತ್ಯವಿದೆ

Next Post

ಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡರ ಬೃಹತ್ ಪ್ರತಿಭಟನಾ ಮೆರವಣಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡರ ಬೃಹತ್ ಪ್ರತಿಭಟನಾ ಮೆರವಣಿಗೆ

ಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡರ ಬೃಹತ್ ಪ್ರತಿಭಟನಾ ಮೆರವಣಿಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
SWR to run special trains for Good Friday, Easter rush

ಬೆಂಗಳೂರು – ರೂಪ್ಸಾ ನಡುವೆ ವಿಶೇಷ ರೈಲು ಸೇವೆ

April 14, 2026
ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

April 14, 2026
‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

April 14, 2026
ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

April 14, 2026
ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

April 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL