ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಪಿಎಸ್‌ಐ ಅಕ್ರಮ ಪರೀಕ್ಷಾ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಕಾನೂನಿನ ಕಕ್ಷೆಗೆ ತಂದು ಭ್ರಷ್ಟರನ್ನು ಮಟ್ಟ ಹಾಕುವವರೆಗೂ ವಿಶ್ರಮಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರವರು Home Minister Araga Gnanendra ಗುಡುಗಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಇಂದು ನೂತನವಾಗಿ ನಿರ್ಮಿಸಲಾದ ನಿಪ್ಪಾಣಿ ಶಹರ ಮತ್ತು ಗ್ರಾಮೀಣ ಪೊಲೀಸ್ ಠಾಣೆ ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಿಎಸ್‌ಐ ಹಗರಣದ ತನಿಖೆ ಯಾವುದೇ ಹಸ್ತಕ್ಷೇಪ ಇಲ್ಲದೆ ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದೆ. ಕಾಂಗ್ರೆಸ್ ನಾಯಕರು ಹತಾಶರಾಗಿ ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತಿದ್ದಾರೆ ಎಂದರು.

Also read: ಭದ್ರಾವತಿ: ಬಿಜೆಪಿ ಮಂಡಲ ನೂತನ ಅಧ್ಯಕ್ಷರಾಗಿ ಧರ್ಮಪ್ರಸಾದ್ ಆಯ್ಕೆ
ಬಿಜೆಪಿ ವಿರೋಧ ಪಕ್ಷವಾಗಿ ಕಡ್ಲೆಪುರಿ ತಿನ್ನುತ್ತಾ ಇದ್ದರಾ? ಎಂದ ಸಿದ್ದರಾಮಯ್ಯನವರ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಸಚಿವರು, ನಾವು ಕೇಳಿದ್ದೆವು, ಆದರೆ ಅವರು ಸ್ಪಂದಿಸಿರಲಿಲ್ಲ”. ನಾವುಗಳು ಕೇಳದೇ ಇರುವುದನ್ನು, ಅವರು (ಸಿದ್ದರಾಮಯ್ಯ) ಕೇಸುಗಳನ್ನು ಮುಚ್ಚಿ ಹಾಕುವುದಕ್ಕೆ ಸಿಕ್ಕಿದ ಪರವಾನಿಗೆ ಎಂದು ತಿಳಿದಿದ್ದರೇ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.











Discussion about this post