ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ರಾಜ್ಯದಲ್ಲಿರುವ ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕಾಗಿ ಭೂ ಮಂಜೂರಾತಿ ಮಾಡಲು ರಾಜ್ಯದಲ್ಲಿ ಸರ್ಕಾರಿ ಭೂಮಿಯ ತೀವ್ರ ಕೊರತೆಯಿರುವುದರಿಂದ, ಅವರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ #Minister Krishna Bairegowda ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಸಿ. ಎನ್. ಮಂಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
Also read: ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರ ಕುರಿತಂತೆ ಗೌರವ ಮತ್ತು ಅಭಿಮಾನವಿದೆ. ಜವಾನ್ ಸಮ್ಮಾನ್ ಹೆಸರಿನಲ್ಲಿ ಮಾಜಿ ಸೈನಿಕರಿಗೆ #Ex-Serviceman ಸರ್ಕಾರಿ ವೆಚ್ಚದಲ್ಲಿಯೇ ಲೇ ಔಟ್ #Jawan Samman Layout ಮಾಡಿ, ನಿವೇಶನ ನೀಡುವ ಕುರಿತಂತೆ ಪ್ರಸ್ತುತ ಅಧಿವೇಶನ ಮುಗಿದ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
ರಾಜ್ಯದಲ್ಲಿ ಪ್ರಸ್ತುತ 16065 ಮಾಜಿ ಸೈನಿಕರು ಭೂ ಮಂಜುರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 6783 ಅರ್ಜಿ ವಿಲೇವಾರಿ ಮಾಡಿದ್ದು, 9282 ಅರ್ಜಿಗಳು ಬಾಕಿ ಇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post