ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾನಾ ಸಂಘಟನೆಗಳು ಬಸ್ತವಾಡ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ Minister S T Somashekar ಅವರು ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿದರು.
ಇದೇ ವೇಳೆ ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದ ಸಚಿವರು, ತಮ್ಮ ಬೇಡಿಕೆಗಳನ್ನು ಸಂಬಂಧಪಟ್ಟ ಸಚಿವರು ಮತ್ತು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ತೊಗರಿಗೆ ಬೆಳೆ ವಿಮೆ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ, ಸೇವಾ ಭದ್ರತೆ, ವೇತನ ಶ್ರೇಣಿ, ಪಿಂಚಣಿ ಮತ್ತು ಇತರೆ ಸೌಲಭ್ಯಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಬ್ಯಾಂಕುಗಳ ಕ್ಷೇಮಾಭಿವೃದ್ಧಿ ಮಹಾಮಂಡಳ, ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (AITUC) ರಾಜ್ಯ ಸಮಿತಿ, ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ, ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ ಸೇರಿದಂತೆ ನಾನಾ ಸಂಘಟನೆಗಳ ಮುಖಂಡರು ಸಚಿವರಿಗೆ ಅಹವಾಲು ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post