No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಉತ್ತಮ ಮಾರುಕಟ್ಟೆ ಮೂಲಕ ಗೃಹ ಹಾಗೂ ಗುಡಿ ಕೈಗಾರಿಕೆಗಳ ಆರ್ಥಿಕ ಅಭಿವೃದ್ಧಿ ಸಾಧ್ಯ : ಸಿಎಂ

kalpa News by kalpa News
December 16, 2021
in ಬೆಳಗಾವಿ
0
ತಜ್ಞರ ಜೊತೆ ಚರ್ಚಿಸಿ ನೈಟ್ ಕರ್ಫ್ಯೂ ಬಗ್ಗೆ ತೀರ್ಮಾನ: ಸಿಎಂ ಬೊಮ್ಮಾಯಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಉತ್ತಮ ಮಾರುಕಟ್ಟೆ ಅವಕಾಶಗಳನ್ನು ಒದಗಿಸುವ ಮೂಲಕ ಗುಡಿ ಹಾಗೂ ಗೃಹ ಕೈಗಾರಿಕೆಗಳ ಆರ್ಥಿಕ ಅಭಿವೃದ್ಧಿ ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಬೆಳಗಾವಿಯಲ್ಲಿ ಆಯೋಜಿಸಿದ್ದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಸೃಜನಶೀಲ ಸೃಷ್ಟಿಗೆ ಅವಕಾಶವಿರುವ ವಸ್ತುಪ್ರದರ್ಶನದಿಂದ ಸ್ವಸಹಾಯ ಸಂಘಗಳ ಉತ್ಪನ್ನಗಳ ಮೂಲಕ ಸ್ತ್ರೀ ಶಕ್ತಿಯ ಪರಿಚಯ ನನಗಾಯಿತು. ಇಂತಹ ಪ್ರಯತ್ನ ನಮ್ಮ ರಾಜ್ಯದಲ್ಲಾಗಿದ್ದು ಹೆಮ್ಮೆಯ ವಿಷಯ. ಪ್ರತಿಯೊಬ್ಬ ಕನ್ನಡಿಗರೂ ಗೌರವಯುತವಾಗಿ ದುಡಿಯಬೇಕೆಂಬುದು ಸರ್ಕಾರದ ಉದ್ದೇಶ. ಕಾಯಕಕ್ಕೆ ಇಚ್ಛಾಶಕ್ತಿಯ ಜೊತೆಗೆ ಅವಕಾಶಗಳು ಬೇಕು. ದುಡಿಯುವವರಿಗೆ ಅವಕಾಶವನ್ನು ಒದಗಿಸುವುದು ಸರ್ಕಾರದ ಹಾಗೂ ಸಮಾಜದ ಕರ್ತವ್ಯ. ರಾಜ್ಯದ ಪ್ರಗತಿಗಾಗಿ, ಪ್ರತಿಯೊಂದು ಕುಟುಂಬವೂ ಕೂಡ ಸ್ವಾಭಿಮಾನ ಹಾಗೂ ಸಂತೋಷದ ಬದುಕನ್ನು ನಡೆಸುವ ಸಲುವಾಗಿ ಇಂತಹ ಕಾರ್ಯಕ್ರಮಗಳ ಮೂಲಕ ಸರ್ಕಾರ ಸಹಕಾರ ನೀಡಲಿದೆ ಎಂದರು.

ಇಡೀ ದೇಶದಲ್ಲಿ ತಲಾವಾರು ಆದಾಯದಲ್ಲಿ ರಾಜ್ಯ ಮೂರನೇ ಸ್ಥಾನದಲ್ಲಿದೆ. ಕೇವಲ 30 % ಜನ ತಲಾವಾರು ಆದಾಯದ ಹೆಚ್ಚಳಕ್ಕೆ ಕಾರಣರಾಗಿದ್ದಾರೆ. ಉಳಿದ 70% ಜನ ಬದುಕಿನ ನಿರಂತರತೆಗೆ ಕೆಲಸ ಮಾಡುತ್ತಿದ್ದಾರೆ. ಈ 70% ಜನ ಆರ್ಥಿಕ ಸ್ಥಿತಿ ಉತ್ತಮಗೊಳಿಸಲು ಸರ್ಕಾರ ಸಹಕಾರ ನೀಡಲಿದೆ. ಈ ಕುಶಲಕರ್ಮಿಗಳ ಆರ್ಥಿಕ ಸಬಲೀಕರಣದ ಮೂಲಕ ರಾಜ್ಯದ ಜಿಡಿಪಿಗೆ ಸಹಾಯವಾಗುತ್ತದೆ. ರಾಜ್ಯವನ್ನು ಕಟ್ಟಲು ಪ್ರತಿಯೊಬ್ಬರಿಗೂ ದುಡಿಯುವ ಅವಕಾಶ ನೀಡಬೇಕು. ದುಡಿಯುವವರ ಆದಾಯ ಹೆಚ್ಚಳವಾದಾಗ, ವ್ಯಾಪಾರ ಹೆಚ್ಚಾಗಿ ಬೇರೆ ರೂಪದಲ್ಲಿ ತೆರಿಗೆ ಬರುತ್ತದೆ. ರಾಜ್ಯದ ಒಟ್ಟು ತಲಾವಾರು ಆದಾಯವೂ ಹೆಚ್ಚಾಗುತ್ತದೆ ಎಂದು ತಿಳಿಸಿದರು.

ಮಹಿಳೆಯ ಆರ್ಥಿಕ ಸಬಲೀಕರಣಕ್ಕೆ ಸರ್ಕಾರದ ಆದ್ಯತೆ :
ಕುಶಲಕರ್ಮಿಗಳ ಆದಾಯದ ಜೊತೆಗೆ ರಾಜ್ಯದ ಆದಾಯವೂ ಜಾಸ್ತಿಯಾಗುತ್ತದೆ. ಈ ಮೇಳದ ಉದ್ದೇಶ ಹೆಚ್ಚಿನ ಕುಶಲಕರ್ಮಿಗಳಿಗೆ ಕೆಲಸ ಸಿಗಬೇಕು. ಅವರು ಇತರರಿಗೆ ಉದ್ಯೋಗ ನೀಡುವಂತಾಗಬೇಕು. ಮಹಿಳೆಯ ಆರ್ಥಿಕ ಸಬಲೀಕರಣದ ಬಗ್ಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ. ನಮ್ಮ ಗುರಿ ಗ್ರಾಮಗಳಲ್ಲಿರುವ ಮಹಿಳೆಯರ ವೈಯಕ್ತಿಕ ಹಾಗೂ ಸಾಮೂಹಿಕ ಚಟುವಟಿಕೆ. ಇದನ್ನು ನಾವು ಕೌಶಲ್ಯಪೂರ್ಣವಾಗಿ ಮಾಡಬೇಕು. ಸಣ್ಣಪುಟ್ಟ ಯಂತ್ರಗಳು, ವ್ಯಾಪಾರ ಪ್ರಾರಂಭಿಸಲು ಹಣಕಾಸಿನ ನೆರವು ನೀಡುವಂತಹ ಕೆಲಸವನ್ನು ಮಾಡಬೇಕು. ಆಗ ನಾವು ಹಾಕುವ ಬಂಡವಾಳಕ್ಕೆ ಪ್ರತಿಫಲ ಇರುತ್ತದೆ. ಇದು ಸ್ತ್ರೀ ಶಕ್ತಿ. ಇದನ್ನು ಸಾಧಿಸುವ ಸಲುವಾಗಿ ಎಸ್.ಸಿ/ಎಸ್.ಟಿ, ಹಿಂದುಳಿದ ಮಹಿಳೆಯರಿಗೆ ಕೌಶಲ್ಯ ತರಬೇತಿಯನ್ನು ನೀಡಿ ಅವರಿಂದ ಉತ್ಪಾದನೆ ಮಾಡಿಸುವುದಲ್ಲದೆ, ಮಾಡುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಿ ಮಾರುಕಟ್ಟೆಯ ಲಾಭದಲ್ಲಿ ಅವರಿಗೆ ಪಾಲು ಕೊಡುವ ಕಲಸವನ್ನು ಮಾಡುತ್ತೇವೆ ಎಂದರು.

ಮಧ್ಯವರ್ತಿಗಳ ನಿಯಂತ್ರಣ:
ನೇರವಾದ ಮಾರುಕಟ್ಟೆ ಸಂಪರ್ಕ ಮಾಡಿಕೊಟ್ಟರೆ, ಮದ್ಯವರ್ತಿಗಳನ್ನು ತಡೆಗಟ್ಟಬಹುದು. ಮಹಿಳೆಯರ ಬಗ್ಗೆ ಹೆಚ್ಚಿನ ನಂಬಿಕೆ ಇರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಪುರುಷರಿಗಿಂತ ಹೆಚ್ಚು ದುಡಿಯುತ್ತಾರೆ. ನೈಸರ್ಗಿಕವಾಗಿ ಹೆಚ್ಚು ಶ್ರಮಜೀವಿಗಳು, ಪ್ರಾಮಾಣಿಕರು. ಹೀಗಾಗಿ ಕಾರ್ಯಕ್ರಮ ಮತ್ತು ಬಂಡವಾಳವನ್ನು ಅವರಿಗಾಗಿಯೇ ರೂಪಿಸಲಾಗುತ್ತದೆ. ಬ್ರಾಂಡಿಂಗ್ ಮಾಡಲಾಗುತ್ತದೆ. ನಮ್ಮ ಮಹಿಳೆಯರು ತಯಾರು ಮಾಡಿರುವ ಉತ್ಪನ್ನಗಳಿಗೆ ಸೂಕ್ತ ಬೆಲೆ ಹಾಗೂ ಮಾರುಕಟ್ಟೆ ದೊರೆಯಬೇಕು ಎಂದರು.

ಪ್ರಾಯೋಗಿಕವಾಗಿ 7500 ಸ್ತ್ರೀಶಕ್ತಿ ಸಂಘಗಳಿಗೆ ಮೈಕ್ರೋ ವ್ಯವಹಾರಕ್ಕಾಗಿ 1 ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ. ಅದು ಯಶಸ್ವಿಯಾದರೆ ರಾಜ್ಯದ ಎಲ್ಲಾ ಸ್ತ್ರೀಶಕ್ತಿ ಸಂಘಗಳಿಗೆ ಅನುದಾನ ನೀಡಲಾಗುವುದು. ಶ್ರಮಕ್ಕೆ ಯಾವಾಗಲೂ ಯಶಸ್ಸು ಸಿಕ್ಕೇಸಿಗುತ್ತದೆ. ನೀವು ಶ್ರಮ ವಹಿಸಿ, ನಿಮ್ಮ ಶ್ರಮಕ್ಕೆ, ಬೆವರಿನ ಹನಿಗೆ ನಾವು ಬೆಲೆ ಸಿಗುವಂತೆ ನಾವು ಮಾಡುತ್ತೇವೆ ಎಂದು ಭರವಸೆ ನೀಡಿದರು.

ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ಮಳಿಗೆಯೊಂದರಲ್ಲಿ 600 . ಮೊತ್ತದ ಚನ್ನಪಟ್ಟಣ ಗೊಂಬೆಗಳ ಆಟಿಕೆಗಳನ್ನು ಖರೀದಿಸಿರು.

ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಮಾತನಾಡಿ ಸಂಜೀವಿನಿ ಸ್ವಸಹಾಯ ಸಂಘಗಳ ಉತ್ಪನ್ನಗಳಿಗೆ 4ಜಿ‌ ವಿನಾಯಿತಿ‌ ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಅಲ್ಲದೆ, ಅವರ ಉತ್ಪನ್ನಗಳಿಗೆ ಗ್ರಾಮ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸುವ ಭರವಸೆ ಕೂಡ ನೀಡಿದ್ದಾರೆ ಎಂದರು.

ಶಾಸಕ ಅನಿಲ‌ ಬೆನಕೆ, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಕೌಶಲ್ಯಾಭಿವೃದ್ದಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್, ಎನ್ ಆರ್ ಎಲ್ ಎಂ ಮಿಷನ್ ನಿರ್ದೇಶಕಿ ಮಂಜುಶ್ರೀ ಇದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviCM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಬೆಳಗಾವಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮತಾಂತರ ನಿಷೇಧ ಕಾಯ್ದೆಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

Next Post

ಅತಿವೃಷ್ಟಿ, ಅನಾವೃಷ್ಟಿಯಿಂದ ಬಹಳಷ್ಟು ನಷ್ಟ : ಸೂಕ್ತ ಪರಿಹಾರಕ್ಕೆ ಶಾಸಕ ಖಾಶೆಂಪುರ್ ಆಗ್ರಹ

kalpa News

kalpa News

Next Post
ಅಗಲಿದ ಗಣ್ಯರಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಸಂತಾಪ…

ಅತಿವೃಷ್ಟಿ, ಅನಾವೃಷ್ಟಿಯಿಂದ ಬಹಳಷ್ಟು ನಷ್ಟ : ಸೂಕ್ತ ಪರಿಹಾರಕ್ಕೆ ಶಾಸಕ ಖಾಶೆಂಪುರ್ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL