ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮಾಜಿ ಸಚಿವ, ಶಾಸಕ ಈಶ್ವರಪ್ಪ MLA Eshwarappa ಕಲಾಪಕ್ಕೆ ಗೈರಾಗಿದ್ದಾರೆ.
ಈ ಕುರಿತಂತೆ ಸಭಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, 15ನೇ ವಿಧಾನಸಭೆಯ 14ನೇ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಆದರೆ, ಅನಿವಾರ್ಯ ತುರ್ತು ವೈಯಕ್ತಿಕ ಕಾರಣಗಳಿಂದಾಗಿ ಈ ಕಾರ್ಯಕ್ರಲಾಪಗಳಲ್ಲಿ ಪಾಲ್ಗೊಳ್ಳಲು ಕಷ್ಟಕರವಾಗಿರುತ್ತದೆ. ಆದ್ದರಿಂದ ಅಧಿವೇಶನದ ದಿನಗಳಿಗೆ ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ಕೋರಿದ್ದಾರೆ.
ಆದರೆ, ಬಾಗಲಕೋಟೆಯಲ್ಲಿಂದು ಮಾತನಾಡಿರುವ ಈಶ್ವರಪ್ಪ, ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ಟ ಸಿಕ್ಕ ನಂತರವೂ ಸಂಪುಟಕ್ಕೆ ಸೇರಿಸಿಕೊಳ್ಳದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.
ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ ಹಾಗೂ ಪಕ್ಷದ ವರಿಷ್ಠರಿಗೆ ಸಂದೇಶ ರವಾನಿಸುವ ಉದ್ದೇಶದಿಂದಲೇ ಕಲಾಪಕ್ಕೆ ಗೈರಾಗಿದ್ದಾರೆ ಎಂದು ಹೇಳಲಾಗಿದೆ.
Also read: ಡಿ.ಕೆ. ಶಿವಕುಮಾರ್ ಮಾಲಿಕತ್ವದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ: ದಾಖಲೆಗಳ ಪರಿಶೀಲನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post