No Result
View All Result
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?
English Articles

Zojila Tunnel Nears Completion | A Milestone in India’s Infrastructure & National Security

by ಕಲ್ಪ ನ್ಯೂಸ್
June 8, 2026
0

• A New Direction for Connectivity Between Jammu & Kashmir and Ladakh • A Historic Moment in India’s Infrastructure History...

Read moreDetails
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಅಂಗನವಾಡಿ ಕಾರ್ಯಕರ್ತೆಯರ ಇಎಸ್ ಐ ಸೌಲಭ್ಯ ವಿಸ್ತರಿಸಲು ಅವಕಾಶವಿಲ್ಲ: ಸಚಿವ ಆಚಾರ ಹಾಲಪ್ಪ ಬಸಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 24, 2022
in ಬೆಳಗಾವಿ
0
ಅಂಗನವಾಡಿ ಕಾರ್ಯಕರ್ತೆಯರ ಇಎಸ್ ಐ ಸೌಲಭ್ಯ ವಿಸ್ತರಿಸಲು ಅವಕಾಶವಿಲ್ಲ: ಸಚಿವ ಆಚಾರ ಹಾಲಪ್ಪ ಬಸಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ ಸುವರ್ಣಸೌಧ  |

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಸೇವೆಯು ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಗೌರವ ಸೇವೆಯಾಗಿರುವುದರಿಂದ ಮತ್ತು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರನ್ನು ಕಾರ್ಮಿಕರೆಂದು ಪರಿಗಣಿಸದಿರುವುದರಿಂದ ಇವರಿಗೆ ಇಎಸ್ ಐ ಸೌಲಭ್ಯ ವಿಸ್ತರಿಸಲು ಅವಕಾಶವಿರುವುದಿಲ್ಲ ಹಾಗೂ ಕನಿಷ್ಟ ವೇತನ ಕಾಯ್ದೆ ಇವರಿಗೆ ಅನ್ವಯಿಸುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವ ಆಚಾರ ಹಾಲಪ್ಪ ಬಸಪ್ಪ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರುಗಳಿಗೆ ಸರ್ಕಾರವು ಹೆಚ್ಚಿನ ಪ್ರೋತ್ಸಾಹವನ್ನು ನೀಡುವ ಬದಲಿಗೆ ಇವರಿಗೆ ಕನಿಷ್ಠ ಪ್ರಮಾಣದ ಗೌರವ ಧನವನ್ನು ನೀಡುತ್ತಿದೆ. ಈ ಅಂಗನವಾಡಿ ಉದ್ಯೋಗಿಗಳಿಗೆ ಸರ್ಕಾರವು ಸಾಮಾಜಿಕ, ಆರ್ಥಿಕ ಮತ್ತು ಔದ್ಯಮಿಕ ಭದ್ರತೆಯನ್ನು ಒದಗಿಸುವ ಕಾಳಜಿ ತೋರದೆ ಕೇವಲ ದುಡಿಮೆಗಾಗಿ ಬಳಕೆಯ ವಸ್ತುಗಳಂತೆ ವ್ಯವಹರಿಸುತ್ತಿರುವುದು ಶೋಷಣಾಣಾತ್ಮಕ ಧೋರಣೆಯಾಗಿದೆ. ಈ ನೌಕರಿಗೆ ಸಾಮಾಜಿಕ ಸುರಕ್ಷ ಯೋಜನೆಯಾದ ಇ.ಎಸ್‌.ಐ. ಸೌಲಭ್ಯ ಹಾಗೂ ಸರ್ಕಾರಿ ನೌಕರರಿಗೆ ರೂಪಿಸಿರುವ ನೌಕರ ಸ್ನೇಹಿ ಉಚಿತ ವೈದ್ಯಕೀಯ ಯೋಜನೆಯನ್ನು ಇವರಿಗೂ ಸಹ ವಿಸ್ತರಿಸದೇ ವಿಚಾರವು ಗಂಭೀರವಾಗಿದೆ. ನಿಸ್ವಾರ್ಥತೆ ಮತ್ತು ಸೇವಾ ಮನೋಭಾವದಿಂದ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಮಸ್ಯೆಯನ್ನು ಚರ್ಚಿಸಿ ಸೂಕ್ತ ಪರಿಹಾರವನ್ನು ಒದಗಿಸಬೇಕು ಎಂದು ಸದಸ್ಯ ಸಲೀಂ ಅಹ್ಮದ್ ಅವರು ನಿಯಮ 330ರಡಿ ಮಂಡಿಸಿದ ವಿಷಯಕ್ಕೆ ಸಚಿವರು ತಿಳಿಸಿದ್ದಾರೆ.
ಸಮಗ್ರ ಶಿಶು ಅಭಿವೃದ್ಧಿ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದೆ. ಈ ಯೋಜನೆಯು 1975ರಿಂದ ಜಾರಿಗೆ ಬಂದಿರುತ್ತದೆ. 204 ಶಿಶು ಅಭಿವೃದ್ಧಿ ಯೋಜನೆಗಳ ಮೂಲಕ 66,361 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ, ಈ ಯೋಜನೆಯಡಿ 64,729 ಅಂಗನವಾಡಿ ಕಾರ್ಯಕರ್ತೆಯರು ಮತ್ತು 59,627 ಅಂಗನವಾಡಿ ಸಹಾಯಕಿಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ರೂ, ಸಹಾಯಕಿಯರಿಗೆ 5250 ರೂ. ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 6,250 ರೂ.ಗಳ ಗೌರವಧನವನ್ನು ಕಳೆದ ಮಾರ್ಚವರೆಗೆ ಪಾವತಿಸಲಾಗುತ್ತಿದ್ದು, 2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತ ಸೇವಾ ಹಿರಿತನದ ಆಧಾರದ ಮೇಲೆ 20 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರಿಗೆ 1500 ರೂ., 10 ವರ್ಷದಿಂದ 20 ವರ್ಷ ಸೇವೆ ಸಲ್ಲಿಸಿದವರಿಗೆ 1,250 ರೂ. ಮತ್ತು 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರಿಗೆ 1,000 ರೂ. ಗೌರವಧನವನ್ನು ಕಳೆದ ಏಪ್ರೀಲದಿಂದ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸೇವೆಯಲ್ಲಿರುವಾಗ ಮರಣ ಹೊಂದಿದಲ್ಲಿ ಅವರ ಕುಟುಂಬದ ಕಾನೂನುಬದ್ಧ ವಾರಸುದಾರರಿಗೆ 50 ಸಾವಿರ ರೂ. ನೀಡಲಾಗುತ್ತಿದೆ. 2011 ರಿಂದ 2015ರವರೆಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ವಂತಿಕೆ ಆಧಾರಿತ ಪಿಂಚಣಿ ಯೋಜನೆಯಡಿ ನೋಂದಣಿಯಾದ 18-55 ವರ್ಷ ಅಂಗನವಾಡಿ ಕಾರ್ಯಕರ್ತೆ ಅಂಗನವಾಡಿ ಸಹಾಯಕಿಯರಿಂದ ಕ್ರಮವಾಗಿ 150 ರೂ. ಹಾಗೂ 84 ರೂ. ಮಾಹೆಯಾನ ವಂತಿಗೆಯಲ್ಲಿ ಪಡೆದು ವಸೂಲಿ ಮಾಡಿ ಅಷ್ಟೇ ಮೊತ್ತದ ವಂತಿಗೆಯನ್ನು ಸರ್ಕಾರ ಭರಿಸುತ್ತದೆ.
ಎನ್.ಪಿ.ಎಸ್‌. ಯೋಜನೆಯಿಂದ ವಂಚಿತರಾಗಿ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರಿಗೆ ಅನುಕ್ರಮವಾಗಿ 50 ಸಾವಿರ ರೂ. ಮತ್ತು 30 ಸಾವಿರ ರೂ.ಗಳನ್ನು ಪಾವತಿಸಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರಿಗೆ ವೈದ್ಯಕೀಯ ಮರುಪಾವತಿ ಯೋಜನೆಯನ್ನು ಜಾರಿಗೊಳಿಸಿದ್ದು, ಗುರುತರ ಕಾಯಿಲೆಗಳಾದ ಹೃದ್ರೋಗ ಶಸ್ತ್ರ ಚಿಕಿತ್ಸೆ, ಕ್ಯಾನ್ಸರ್ ಡಯಾಲಿಸಿಸ್ ಮತ್ತು ಮೂತ್ರಪಿಂಡ ಜೋಡಣೆ ಮತ್ತು ಗರ್ಭಕೋಶ ಸಂಬಂಧಪಟ್ಟ ಕಾಯಿಲೆಗಳಿಂದ ಬಳಲುತ್ತಿದ್ದಲ್ಲಿ ಗರಿಷ್ಠ 50 ಸಾವಿರ ರೂ.ಗಳ ವೈದ್ಯಕೀಯ ವೆಚ್ಚವನ್ನು ಮರುಪಾವತಿಸಲಾಗುತ್ತಿದೆ. ಮಾತೃಪೂರ್ಣ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರಿಗೂ ಮಧ್ಯಾಹ್ನದ ಬಿಸಿಯೂಟವನ್ನೂ ಸಹ ಒದಗಿಸಲಾಗುತ್ತಿದೆ.

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ಸೌಲಭ್ಯ ಪಡೆಯುವ ಫಲಾನುಭವಿಗಳ ಅರ್ಜಿಯನ್ನು ಆನ್ ಲೈನ್‌ನಲ್ಲಿ ಅಳವಡಿಸಿದಾಗ ಒಂದು ಅರ್ಜಿಗೆ 50 ರೂ. ನ್ನು ಹಾಗೂ 3 ಅರ್ಜಿಗಳನ್ನು ಅಳವಡಿಸಿದ ನಂತರ ಪ್ರತ್ಯೇಕವಾಗಿ 50 ರೂ.ಗಳು ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಗೆ 200 ರೂ.ಗಳು ಮತ್ತು ಅದೇ ರೀತಿ ಅಂಗನವಾಡಿ ಸಹಾಯಕರಿಗೆ ಫಲಾನುಭವಿಗಳ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಅಳವಡಿಸಿದಾಗ ಒಂದು ಅರ್ಜಿಗೆ 25‌ ರೂ. ಹಾಗೂ 3 ಅರ್ಜಿಗಳನ್ನು ಅಳವಡಿಸಿದ ನಂತರ ಪ್ರತ್ಯೇಕವಾಗಿ 25 ರೂ.ಗಳು ಸೇರಿದಂತೆ ಒಟ್ಟು 100 ರೂ.ರಂತೆ ಪ್ರೋತ್ಸಾಹಧನ ನೀಡಲಾಗುವುದು.
ಭಾಗ್ಯಲಕ್ಷ್ಮಿ ಯೋಜನೆಯಡಿ ಫಲಾನುಭವಿಯನ್ನು ಗುರುತಿಸಿ, ನೊಂದಾಯಿಸಿಕೊಳ್ಳುವ ಹಾಗೂ ಪ್ರಗತಿ ಪರಿಶೀಲನೆ ಮಾಡುವ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹೆಯಾನ 25 ರೂ.ಗಳ ಪ್ರೋತ್ಸಾಹ ಧನ ನೀಡಲಾಗುವುದು.ಜೊತೆಗೆ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರಿಗೆ ಸೇವಾ ಸೌಲಭ್ಯಗಳನ್ನು ನೀಡುವುದರ ಜೊತೆಗೆ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಗೌರವಧನದ ಜೊತೆಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದ ವತಿಯಿಂದ ಗೌರವಧನವನ್ನು ಪಾವತಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಳಗಾವಿ ಸುವರ್ಣಸೌಧ
Share197Tweet123Send
Previous Post

ಕೇಂದ್ರ ಸರ್ಕಾರದ ಜನಪರ ಕಾರ್ಯಗಳನ್ನು ಜನರಿಗೆ ತಲುಪಿಸಿ : ಸಂಸದ ರಾಘವೇಂದ್ರ

Next Post

10 ದಿನದೊಳಗಾಗಿ ಮಂಗಳೂರು ವಿವಿ ಪದವಿ ತರಗತಿಗಳ ಫಲಿತಾಂಶ: ಸಚಿವ ಅಶ್ವತ್ಥನಾರಾಯಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
‘ಸೂಪರ್‌ 30’ಗಾಗಿ ‘RETE’ ಯೋಜನೆಗೆ 14 ಸರ್ಕಾರಿ, 16 ಖಾಸಗಿ‌ ಬಿಇ ಕಾಲೇಜುಗಳ ಆಯ್ಕೆ: ‌ಸಚಿವ ಅಶ್ವತ್ಥ ನಾರಾಯಣ್

10 ದಿನದೊಳಗಾಗಿ ಮಂಗಳೂರು ವಿವಿ ಪದವಿ ತರಗತಿಗಳ ಫಲಿತಾಂಶ: ಸಚಿವ ಅಶ್ವತ್ಥನಾರಾಯಣ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

June 7, 2026
ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL