ಕಲ್ಪ ಮೀಡಿಯಾ ಹೌಸ್
ಬೆಳಗಾವಿ: ಸಾರಿಗೆ ಇಲಾಖೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನೌಕರರು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದೆ. ಹೀಗಿರುವಾಗ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಇಂದು ಬೆಂಗಳೂರಿನಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಂಡು ಮುಂದೆ ತೆಗೆದುಕೊಳ್ಳಬೇಕಾದ ಕಠಿಣ ಕ್ರಮದ ಬಗ್ಗೆ ಪರಾಮರ್ಶೆ ನಡೆಸುತ್ತೇನೆ ಎಂದರು.
ಕಾಂಗ್ರೆಸ್ ನಾಯಕರು ಬಸ್ ನೌಕರರ ಮುಷ್ಕರಕ್ಕೆ ಬೆಂಬಲ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು ರಾಜಕೀಯಕ್ಕಾಗಿ ಬಳಸಿಕೊಂಡರೆ ಏನು ಹೇಳಲಿ, ಸಿಬ್ಬಂದಿ ಕೆಲಸಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದಷ್ಟೇ ಹೇಳುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post