ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ರಾಜ್ಯದಲ್ಲಿ ಸಾಧ್ಯವಾದಷ್ಟು ಕಡೆ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Minister Lakshmi Hebbalkar ವಿಧಾನಸಭೆಗೆ ಮಾಹಿತಿ ನೀಡಿದರು.
ತಿಪಟೂರಿನ ಷಡಕ್ಷರಿ.ಕೆ ಕೇಳಿದ ಪ್ರಶ್ನೆಗೆ ಸಚಿವರು ಬುಧವಾರ ಉತ್ತರಿಸಿದರು.
ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 376 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು, 274 ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿವೆ. 62 ಬಾಡಿಗೆ ಕಟ್ಟಡಗಳಲ್ಲಿವೆ. 22 ಶಾಲಾ ಆವರಣಗಳಲ್ಲಿ ನಡೆಯುತ್ತಿವೆ. 8 ಸಮುದಾಯ ಭವನಗಳಲ್ಲಿ ನಡೆಯುತ್ತಿವೆ. 3 ಪಂಚಾಯಿತಿ ಕಟ್ಟಡಗಳಲ್ಲಿ ನಡೆಯುತ್ತಿವೆ. 7 ಇತರ ಕಟ್ಟಡಗಳಲ್ಲಿ ನಡೆಯುತ್ತಿವೆ. ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಕಳೆದ 3 ವರ್ಷಗಳಲ್ಲಿ 364 ಲಕ್ಷ ರೂ. ಗಳನ್ನು ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು.
Also read: ಬಾಲ್ಯವಿವಾಹ ಪದ್ಧತಿಯನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯದಲ್ಲಿ 4 ಸಾವಿರ ಸರ್ಕಾರಿ ನಿವೇಶನಗಳಿಗೆ ಅಂಗನವಾಡಿ ಹೆಸರು ಹಾಕಿಸಲಾಗಿದೆ. ನಿವೇಶನ ಸಿಕ್ಕ ತಕ್ಷಣ ಅಗತ್ಯವಿರುವ ಎಲ್ಲ ಕಡೆ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು. ಸಾರ್ವಜನಿಕ ಸೌಲಭ್ಯಗಳಿಗಾಗಿ ಮೀಸಲಿಟ್ಟಿರುವ ಸೈಟ್ ಗಳನ್ನು ಅಂಗನವಾಡಿ ಕಟ್ಟಡಕ್ಕೆ ಬಳಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post