ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಟ್ರ್ಯಾಕ್ಟರ್ ರ್ಯಾಲಿಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ #Lakshmi Hebbalkar ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಯಾವುದೇ ರ್ಯಾಲಿ, ಹೋರಾಟಗಳಿಗೆ ನಿರ್ಬಂಧ ಹೇರಬಾರದು, ಇದು ಪ್ರಜಾಪ್ರಭುತ್ವ. ಪಂಚಮಸಾಲಿ ಮೀಸಲಾತಿಗಾಗಿ ನಾನು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದೇನೆ ಎಂದರು.
ಈಗ ಕಬ್ಬಿನ ಸೀಸನ್ ಆಗಿರುವುದರಿಂದ ಟ್ರ್ಯಾಕ್ಟರ್ಗಳು ಹೆಚ್ಚು ಓಡಾಡುತ್ತಿರುತ್ತವೆ. ಅಧಿವೇಶನದ ವೇಳೆ ಯಾವುದೇ ಅಪಘಾತ, ದುರ್ಘಟನೆ ಆಗಬಾರದು ಅಂತಾ ಮುಂಜಾಗ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಂಡಿರಬಹುದು ಎಂದು ಸಚಿವರು ಹೇಳಿದರು.
ನಾನು ಈಗಾಗಲೇ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರ ಜೊತೆ ಮಾತನಾಡಿದ್ದೇನೆ. ಇಂದು ಸಂಜೆ 4 ಗಂಟೆಗೆ ನಾನು ಸ್ವಾಮೀಜಿಗಳು, ಸಿ.ಸಿ.ಪಾಟೀಲ್, ಅರವಿಂದ್ ಬೆಲ್ಲದ ಸೇರಿದಂತೆ ಎಲ್ಲರೂ ಸಭೆ ನಡೆಸುತ್ತಿದ್ದೇವೆ. ಈ ಸಭೆಯಲ್ಲಿ ಒಂದು ನಿರ್ಣಯ ಕೈಗೊಳ್ಳುತ್ತೇವೆ ಎಂದರು.
Also read: ಬಾಣಂತಿಯರ ಸಾವು: ಸಂತ್ರಸ್ತರ ಮನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ
ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಬಂಧಪಟ್ಟಂತೆ ನಾನು ಸ್ವಾಮೀಜಿ ಅವರ ಜೊತೆ ಹಾಗೂ ನಮ್ಮ ಸಮಾಜದ ಇತರ ಪಕ್ಷಗಳ ನಾಯಕರ ಜೊತೆಗೂ ನಿರಂತರ ಸಂಪರ್ಕದಲ್ಲಿದ್ದೇನೆ. ಇಂತಹ ಗುರುಗಳು ಸಿಕ್ಕಿದ್ದು ನಮ್ಮ ಪುಣ್ಯ. ನಾಳೆ ನಡೆಯಲಿರುವ ಸಮಾವೇಶದಲ್ಲಿ ನಾನು ಖಂಡಿತವಾಗಿ ಭಾಗಿಯಾಗುತ್ತೇನೆ ಎಂದು ಸಚಿವರು ತಿಳಿಸಿದರು.
ನಾನು ಸಚಿವೆ ಆಗಿರುವ ಕಾರಣ ವಿಧಾನಸಭೆ ಕಲಾಪದ ವೇಳೆ ಬಾವಿಗಿಳಿದು ಧರಣಿ ಮಾಡುವುದಕ್ಕೆ ಸಾಧ್ಯವಿಲ್ಲ. ವಿಧಾನಸಭೆಯಲ್ಲಿ ಯಾರಾದರೂ ವಿಷಯ ಪ್ರಸ್ತಾಪಿಸಿದಾಗ ಧ್ವನಿಯಾಗಿ ಇರುವೆ. ನಾನೂ ಹಾಗೂ ನನ್ನ ತಮ್ಮ ಚನ್ನರಾಜ ಹಟ್ಟಿಹೊಳಿ ಧ್ವನಿಯಾಗಿ ಇರ್ತೀವಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಪ್ರಕರಣ ಮುಚ್ಚಿಡುವ ಪ್ರಶ್ನೆಯೇ ಇಲ್ಲ
ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) #BIMS ಸಂಭವಿಸಿರುವ ಬಾಣಂತಿಯರು ಹಸಿಗೂಸುಗಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬಿಮ್ಸ್‌ನಲ್ಲಿ ಬಾಣಂತಿಯರು, ಹಸಿಗೂಸುಗಳ ಸಾವಿನ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣ ಕುರಿತು ಈಗಾಗಲೇ ನಾನು ಅಧಿಕಾರಿಗಳ ಜೊತೆ ಮಾತನಾಡಿರುವೆ. ಯಾಕೆ ಸಮಸ್ಯೆಯಾಗಿದೆ, ಎಲ್ಲವನ್ನೂ ಕೂಡ ಚರ್ಚೆ ಮಾಡಿದ್ದೇನೆ ಎಂದರು.
ಯಾವ ಕಾರಣಕ್ಕೆ ಸಾವಿನ ಪ್ರಕರಣಗಳು ಸಂಭವಿಸಿವೆ. ಸಾವನ್ನ ತಡೆಯಲು ಯಾವ ಕ್ರಮಕೈಗೊಳ್ಳಬೇಕು. ಏನೆಲ್ಲ ಮಾಡಬೇಕು ಅದನ್ನ ಮಾಡುತ್ತಿದ್ದೇವೆ. ನಮ್ಮ ಜಿಲ್ಲೆಯಲ್ಲಿ 54 ಲಕ್ಷ ಜನಸಂಖ್ಯೆ ಇದೆ. ಹೀಗಾಗಿ ಅಂಕಿ ಅಂಶ ಹೆಚ್ಚಾಗಿ ಕಾಣುತ್ತಾ ಇದೆ. ಕಾರವಾರ ಸೇರಿದಂತೆ ಅನೇಕ ಕಡೆಗಳಿಂದ ಆಸ್ಪತ್ರೆಗೆ ಬೆಳಗಾವಿಗೆ ಬರುತ್ತಾರೆ ಎಂದು ತಿಳಿಸಿದರು.
ಬಾಣಂತಿರು, ಹಸಿಗೂಸುಗಳ ಸಾವಿಗೆ ಬಹಳಷ್ಟು ಕಾರಣಗಳಿವೆ. ಬಳ್ಳಾರಿ ಪ್ರಕರಣಗಳಿಗೂ, ಬ್ರಿಮ್ಸ್ ಗೂ ಸಂಬಂಧ ಇಲ್ಲ. ಕಬ್ಬಿನಾಂಶ ಕೊರತೆ, ಪ್ರೀ ಮೆಚ್ಯುರ್ ಬೇಬಿ ಹೀಗೆ ಅನೇಕ ಕಾರಣಗಳಿವೆ. ಒಂದು ಲಕ್ಷ ಮಕ್ಕಳು ಹುಟ್ಟಿದರೆ 28 ಮಕ್ಕಳು ಅದರಲ್ಲಿ ತೀರಿಕೊಳ್ಳುತ್ತಿದ್ದಾರೆ. ಇಡೀ ದೇಶಕ್ಕೆ 6ನೇ ಅತ್ಯುತ್ತಮ ಆಸ್ಪತ್ರೆ ಎಂದು ಬಿಮ್ಸ್ ಪಾತ್ರವಾಗಿದೆ. ಬಾಣಂತಿಯರು, ಹಸಿಗೂಸುಗಳ ಸಾವಿಗೆ ಇಂಥದ್ದೇ ಕಾರಣ ಅಂತ ಈ ಹಂತದಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post