No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ ದಂಡ ಸಹಿತ ಜೈಲು

ವಿಧಾನಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ: ಸಚಿವ ಎನ್‌ ಎಸ್‌ ಭೋಸರಾಜು

kalpa News by kalpa News
December 17, 2024
in ಬೆಳಗಾವಿ
0
ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ ದಂಡ ಸಹಿತ ಜೈಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ಕೊಳವೆ ಬಾವಿಗಳನ್ನು #Tube Well ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ಕ್ಕೆ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ ಡ್ರಿಲ್ಲಿಂಗ್‌ ಏಜೆನ್ಸಿ ಹಾಗೂ ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳಿಗೆ 25 ಸಾವಿರ ದಂಡ ಹಾಗೂ 1 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುವ ಮಸೂದೆ ಮಂಡಿಸಿ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು #Minister BoseRaju ತಿಳಿಸಿದರು.

ಇಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೇಯಲ್ಲಿ ಮಸೂದೆ ಅಂಗಿಕಾರವಾದ ನಂತರ ಪ್ರತಿಕ್ರಿಯೆ ನೀಡಿದರು. ವಿಫಲ ಕೊಳವೆ ಬಾವಿಗಳನ್ನು ಮುಚ್ಚದೇ ಇರುವ ಮೂಲಕ ಹಲವಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಪ್ರಕರಣಗಳಿಗೆ ಬ್ರೇಕ್‌ ಹಾಕುವುದು ಸರಕಾರದ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದ್ದು ಇಂದು ವಿಧಾನಸಭೇಯಲ್ಲಿ ಅಂಗೀಕಾರವಾಗಿದೆ.
15 ದಿನಗಳ ಮುಂಚಿತವಾಗಿ ಮಾಹಿತಿ ನೀಡುವುದು ಕಡ್ಡಾಯ:

ಮಸೂದನೆಯ 11 ಏ ಸೆಕ್ಷನ್‌ ಪ್ರಕಾರ ಅಧಿಸೂಚಿತ ಪ್ರದೇಶ ಮತ್ತು ಅಧಿಸೂಚಿತವಲ್ಲದ ಪ್ರದೇಶಗಳಲ್ಲಿ ಕೊಳವೆಬಾವಿ ಕೊರೆಯಲು ಇಚ್ಚಿಸುವವರು ಸಂಬಂಧಪಟ್ಟ ಪಿಡಿಓ, ವಿಲೇಜ್‌ ಅಕೌಂಟೆಂಟ್‌, ಪಟ್ಟಣ ಪಂಚಾಯಿತಿ, ನಗರ ಸಭೆ ಮತ್ತು ಬಿಡಬ್ಲೂಎಸ್‌ಎಸ್‌ಬಿ ಸಂಬಂಧಿಸಿದ ವಾರ್ಡ್‌ ಇಂಜಿನೀಯರ್‌ಗಳಿಗೆ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಬೇಕು. ಇದನ್ನು ಉಲ್ಲಂಘಿಸಿದ ಡ್ರಿಲ್ಲಿಂಗ್‌ ಏಜೆನ್ಸಿ/ ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳಿಗೆ ಐದು ಸಾವಿರ ರೂಪಾಯಿಗಳ ಜುಲ್ಮಾನೆ ಹಾಗೂ ಮೂರು ತಿಂಗಳ ಸಜೆಯನ್ನು ವಿಧಿಸಲಾಗುವುದು.

ಹೆಚ್ಚುತ್ತಿರುವ ಕೊಳವೆ ಬಾವಿಗಳಿಂದ ರಾಜ್ಯದಲ್ಲಿ ದಿನೇ ದಿನೇ ಅಂತರ್ಜಲ ಕುಸಿಯುತ್ತಿದೆ. ಇದನ್ನು ತಡೆಗಟ್ಟುವುದು ಹಾಗೂ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಆಗುವ ಅವಘಢಗಳಿಗೆ ಬ್ರೇಕ್‌ ಹಾಕುವುದು ನಮ್ಮ ಉದ್ದೇಶವಾಗಿದೆ. ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದು, ವಿಧಾನ ಪರಿಷತ್‌ನಲ್ಲೂ ಪ್ರಸ್ತುತ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗುವುದು.

ಎನ್‌ ಎಸ್‌ ಭೋಸರಾಜು, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು.

ವಿಫಲ ಕೊಳವೆ ಬಾವಿಗಳನ್ನು ಮುಚ್ಚುವುದು ಕಡ್ಡಾಯ:

ಕೊಳವೆ ಬಾವಿಗಳನ್ನು ಕೊರೆದ ನಂತರ ಡ್ರಿಲಿಂಗ್‌ ಏಜೆನ್ಸಿ ಮತ್ತು ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳು ಕೊಳವೆ ಬಾವಿಗಳನ್ನು ಸ್ಟೀಲ್‌ ಕ್ಯಾಪ್‌ ಹಾಕಿ ಮುಚ್ಚವುದು ಕಡ್ಡಾಯವಾಗಿದೆ. ವಿಫಲ ಕೊಳವೆ ಬಾವಿಯನ್ನು ಕೆಸರು ಮಣ್ಣು ತುಂಬಿ ಮುಚ್ಚಬೇಕು ಹಾಗೂ 2×2 ಅಡಿಯ ದಿಬ್ಬ ಮಾಡಿ ದಿಬ್ಬಕ್ಕೆ ಫೆನ್ಸಿಂಗ್. ಡ್ರಿಲಿಂಗ್‌ ಏಜೆನ್ಸಿ ಮತ್ತು ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳು ಕೊಳವೆ ಬಾವಿ ಕೊರೆದ 24 ಗಂಟೆಯೊಳಗೆ ಮುಚ್ಚಿರುವ ಬಗ್ಗೆ ಫೋಟೋ ತಗೆದು ಸುರಕ್ಷಿತವಾಗಿ ಮುಚ್ಚಿರುವುದನ್ನು ತಪಾಸಣೆ ಮಾಡಿ ಧೃಢೀಕರಿಸಬೇಕು. ಈ ಬಗ್ಗೆ ಜಾಯಿಂಟ್‌ ಡಿಕ್ಲರೇಷನ್‌ ಅನ್ನು ಸ್ಥಳೀಯ ಪ್ರಾಧಿಕಾರಕ್ಕೆ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ.

ಅಲ್ಲದೇ, ಜಮೀನಿನ ಮಾಲೀಕರು ಕೊಳವೆ ಬಾವಿ ರಿಪೇರಿ ಮಾಡಲು ಪಂಪ್‌ ಅನ್ನು ಹೊರ ತಗೆದಾಗ ಕೊಳವೆಬಾವಿಗೆ ಕ್ಯಾಪ್‌ ಹಾಕಿ ಮುಚ್ಚಬೇಕು. ಕೊಳವೆ ಬಾವಿಯನ್ನು ಪುನಃಶ್ಚೇತನ ಮಾಡಲು ಇಚ್ಚಿಸಿದಲ್ಲಿ ಜಮೀನು ಮಾಲೀಕರು ಕೊಳವೆ ಬಾವಿಗೆ ಮುಚ್ಚಳದಿಂದ ಮುಚ್ಚಿ ಸುರಕ್ಷತೆಯನ್ನು ಕಾಪಾಡಬೇಕು.
ಕೊಳವೆ ಬಾವಿ ಕೊರೆಯುವಾಗ ಸೈನ್‌ ಬೋರ್ಡ್‌ ಕಡ್ಡಾಯ:

ಇನ್ನೂ ಕೊಳವೆ ಬಾವಿಯನ್ನು ಕೊರೆಯುವಾಗ ಎಲ್ಲರಿಗೂ ಕಾಣುವ ರೀತಿಯಲ್ಲಿ ಕೊಳವೆ ಬಾವಿ ಕೊರೆಯುತ್ತಿರುವ ಬಗ್ಗೆ ಎಚ್ಚರಿಕೆಯ ಬೋರ್ಡ್‌ ಅನ್ನು ಪ್ರದರ್ಶಿಸಬೇಕು. ಯಾವುದೇ ಅವಘಡಗಳು ಆಗದಂತೆ ಎಚ್ಚರವಹಿಸುವುದು ಕಡ್ಡಾಯವಾಗಿದೆ ಇದಕ್ಕಾಗಿ ಸುತ್ತಲೂ ಫೆನ್ಸಿಂಗ್‌ ನಿರ್ಮಿಸಿಕೊಳ್ಳಬೇಕು.

Also read: ಹುಬ್ಬಳ್ಳಿ ರೈಲ್ವೆ | ಪಿಂಚಣಿ ಅದಾಲತ್ ಆಯೋಜನೆ | ಎಷ್ಟು ಪ್ರಕರಣ ಪರಿಹಾರವಾಯ್ತು?

ಸ್ಥಳೀಯ ಪ್ರಾಧಿಕಾರ / ಅಧಿಕಾರಿಗಳ ಜವಾಬ್ದಾರಿ:

ಸ್ಥಳೀಯ ಪ್ರಾಧಿಕಾರ ಅಥವಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೊಳವೆ ಬಾವಿ ಕೊರೆಯುವ ಸಂಧರ್ಭದಲ್ಲಿ ಕೈಗೊಳ್ಳಬೇಕಾದ ಎಚ್ಚರಿಕೆಯ ಅಂಶಗಳನ್ನು ಪಾಲಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ತಮ್ಮ ವ್ಯಾಪ್ತಿಯಲ್ಲಿ ಕೊರೆಸಲಾಗುತ್ತಿರುವ ಕೊಳವೆ ಬಾವಿಗಳ ಬಗ್ಗೆ ಅಂತರ್ಜಲ ಅಭಿವೃದ್ದಿ ಇಲಾಖೆಗೆ ಮಾಹಿತಿಯನ್ನು ಸಲ್ಲಿಸಬೇಕು. ಇಂಪ್ಲಿಮೆಂಟಿಂಗ್‌ ಏಜೆನ್ಸಿಯವರು ಸಹ ಕೊಳವೆ ಬಾವಿಯನ್ನು ಮುಚ್ಚುವ ಬಗ್ಗೆ ನಿಗಾವಹಿಸುವಬೇಕು. ಅಲ್ಲದೇ ಪಿಡಿಓ ಗಳು ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಕೊಳವೆ ಬಾವಿ ಮುಚ್ಚುವ ವಿಧಾನಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಬೋರ್ಡ್‌ ಹಾಕುವುದನ್ನು ಕಡ್ಡಾಯಗೊಳಿಸಲಾಗಿವೆ ಎಂದು ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಜೈಲು ಶಿಕ್ಷೆ ಹಾಗೂ ದಂಡ:

ಇಂಪ್ಲಿಮೆಂಟಿಂಗ್‌ ಏಜೆನ್ಸಿ ಹಾಗೂ ಡ್ರಿಲ್ಲಿಂಗ್‌ ಏಜೆನ್ಸಿಗಳು ಮಸೂದೆಯ 11 ಏ ಸೆಕ್ಷನ್‌ನಲ್ಲಿರುವ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ಹತ್ತು ಸಾವಿರ ಜುಲ್ಮಾನೆ ಹಾಗೂ ಒಂದು ವರ್ಷ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಸೆಕ್ಷನ್‌ 21 ಏ ನಿಯಮಗಳನ್ನು ಯನ್ನು ಉಲ್ಲಂಘಿಸುವ ಇಂಪ್ಲಿಮೆಂಟಿಂಗ್‌ ಏಜೆನ್ಸಿ/ ಡ್ರಿಲ್ಲಿಂಗ್‌ ಏಜೆನ್ಸಿಗಳು / ಸರ್ವಿಸಿಂಗ್‌ ಏಜೆನ್ಸಿಗಳಿಗೆ 25 ಸಾವಿರ ರೂಪಾಯಿಗಳ ಜುಲ್ಮಾನೆ ಹಾಗೂ ಒಂದು ವರ್ಷದ ಜೈಲು ಶಿಕ್ಷೆಯನ್ನು ವಿಧಿಸುವ ಅವಕಾಶವನ್ನು ಈ ಮಸೂದೆಯಲ್ಲಿ ಅಳವಡಿಸಲಾಗಿದೆ. ಅಲ್ಲದೇ, ತಮ್ಮ ಜವಾಬ್ದಾರಿ/ಕರ್ತವ್ಯಗಳನ್ನು ನಿಭಾಯಿಸುವಲ್ಲಿ ವಿಫಲವಾಗುವ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಲು ಮಸೂದೆಯಲ್ಲಿ ನಿಯಮಗಳನ್ನು ಅಳವಡಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BelagaviKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister BoserajuNews_in_KannadaNews_KannadaTube Wellಕೊಳವೆ ಬಾವಿಬೆಳಗಾವಿಸಚಿವ ಎನ್.ಎಸ್. ಭೋಸರಾಜು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹುಬ್ಬಳ್ಳಿ ರೈಲ್ವೆ | ಪಿಂಚಣಿ ಅದಾಲತ್ ಆಯೋಜನೆ | ಎಷ್ಟು ಪ್ರಕರಣ ಪರಿಹಾರವಾಯ್ತು?

Next Post

Special train services between Mysuru-Danapur for Kumbh Mela | Here is the details

kalpa News

kalpa News

Next Post
ದಾವಣಗೆರೆ-ಚಿತ್ರದುರ್ಗ-ತುಮಕೂರು ನೂತನ ರೈಲ್ವೆ ಮಾರ್ಗ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ

Special train services between Mysuru-Danapur for Kumbh Mela | Here is the details

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL