ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ರಾಜ್ಯ ಸರ್ಕಾರದ ಸಿವಿಲ್ ಸೇವೆಯಲ್ಲಿನ #Civil Service ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ #Sportsman ಶೇ.2 ರಷ್ಟು ಹುದ್ದೆಗಳನ್ನು ಮೀಸಲಿರಿಸುವ ನಿಯಮಕ್ಕೆ ಸರ್ಕಾರ ತಡೆಯೊಡ್ಡಿದ ವಿಚಾರದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ #MLC D S Arun ಅವರು ಕಿಡಿ ಕಾರಿದ್ದಾರೆನ.
ಪರಿಷತ್’ನಲ್ಲಿ ಶೂನ್ಯ ವೇಳೆ ಅವರು ಪ್ರಸ್ತಾಪಿಸಿದರು.

Also read: ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಯಾವ್ಯಾವ ಕ್ರೀಡೆಯಿಂದ ಸಾಧಕರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ವಿಚಾರದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಕ್ರೀಡಾ ಇಲಾಖೆ ನಡುವೆ ಗೊಂದಲ ಸೃಷ್ಟಿಯಾಗಿದ್ದು, ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ಮಾಡಿರುವ ತಿದ್ದುಪಡಿಯನ್ನು ಪುನರ್ ಪರಿಶೀಲಿಸಲು ಮುಂದಾಗಿರುವ ವಿಚಾರವನ್ನು ಪ್ರಸ್ತಾಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post