ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ Jagadish Shettar ಅವರು ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿರುವುದು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಟಿಕೆಟ್ Parliamentary Election ಲೆಕ್ಕಚಾರಗಳು ಗರಿಗೆದರಿದ್ದು, ಬೆಳಗಾವಿ ಹಾಲಿ ಸಂಸದೆ ಮಂಗಳಾ ಅಂಗಡಿ ಮತ್ತು ಅವರ ಪುತ್ರಿ ಶ್ರದ್ಧಾ ಶೆಟ್ಟರ್‌ಗೆ Shradha shettar ಪಕ್ಷದ ಟಿಕೆಟ್ ಪಡೆಯಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತಿದೆ.
ಶ್ರದ್ಧಾ ಶೆಟ್ಟರ್, ಜಗದೀಶ್ ಶೆಟ್ಟರ್ ಸೊಸೆಯಾಗಿರುವುದರಿಂದ, ಅವರು ಕಾಂಗ್ರೆಸ್‌ನಲ್ಲಿದ್ದರೆ ಬಿಜೆಪಿ ಅವರಿಗೆ ಪಕ್ಷದ ಟಿಕೆಟ್ ನೀಡುವ ಸಂಭವಗಳು ಕಡಿಮೆಯಾಗಿತ್ತು. ಆದರೆ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬದಲಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟು ನೋಡಿದರೆ ಮಂಗಳಾ ಅಥವಾ ಅವರ ಮಗಳು ಶ್ರದ್ಧಾ ಅವರನ್ನು ಕಣಕ್ಕಿಳಿಸಬಹುದು ಎಂದು ಮೂಲಗಳು ತಿಳಿಸಿವೆ.
Also read: ಪರಿಸರ ಪ್ರಜ್ಞೆ ಜಾಗೃತವಾಗಿದ್ದರೆ ಅದುವೇ ನಿಜವಾದ ಸಮಾಜ ಸೇವೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post