ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಅಪಘಾತಕ್ಕೀಡಾಗಿದ್ದು, #Lakshmi Hebbalkar Car Accident ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗ್ಗೆ ಆರು ಘಂಟೆಯ ಸಮಯದಲ್ಲಿ ಕಾರು ಅಪಘಾತವಾಗಿದ್ದು, ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಮಾತನಾಡಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆ ಮುರಿತವಾಗಿದೆ. ಕುತ್ತಿಗೆಗೆ ಪೆಟ್ಟಿಗೆ ಬಿದ್ದಿದೆ. ಮೆದುಳು ಬಾವು ಬಂದಿದೆ. ಹೀಗಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಎಂದು ಹೇಳಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಿಎಲ್ ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದರು. ಮಾರ್ಗ ಮಧ್ಯೆ ಈ ಅಪಘಾತ ಸಂಭವಿಸಿದೆ. ಎಂಎಲ್‌ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯಯಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















