ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಪಂಚಮಸಾಲಿ #Panchamasali ಲಿಂಗಾಯತ ಸಮುದಾಯಕ್ಕೆ ಹಿಂದುಳಿದ ವರ್ಗಗಳ 2A ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿರುವ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ #Laaticharge ಮಾಡಿದ್ದನ್ನು ಖಂಡಿಸಿ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.
ಬೆಳಗಾವಿ ಸುವರ್ಣಸೌಧದ #Belagavi Suvarnasoudha ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್. ಅಶೋಕ್ #R Ashok ನೇತೃತ್ವದಲ್ಲಿ ಬಿಜೆಪಿ ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿ ಲಿಂಗಾಯತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Also read: ರಾಜ್ಯ ಮಾಹಿತಿ ಹಕ್ಕು ವೇದಿಕೆ ವರ್ಷದ ಸಂಭ್ರಮ | ಜಿಲ್ಲಾ, ತಾಲ್ಲೂಕು ಘಟಕಗಳ ಉದ್ಘಾಟನೆ
ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ 23 ಬಿಜೆಪಿ ಶಾಸಕರು, 16 ಎಂಎಲ್ ಸಿಗಳು, ಕೆಲ ಜೆಡಿಎಸ್ ಸದಸ್ಯರು ಭಾಗಿಯಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post