ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಹೆಣ್ಣು ಮಗು ಜನಿಸಿತು ಎಂಬ ಕಾರಣಕ್ಕಾಗಿ ಹೆತ್ತ ತಾಯಿಯೇ ತನ್ನ ಮೂರು ದಿನದ ಕಂದಮ್ಮನನ್ನು ಕತ್ತು ಹಿಸುಕಿ ಕೊಲೆ #Mother Killed Newborn Girlchild ಮಾಡಿರುವ ದಾರುಣ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ.
ತಾಯಿ ಅಶ್ವಿನಿ ಹಳಕಟ್ಟಿ (28) ಕೊಂದ ಪಾಪಿ ತಾಯಿ. ಈಗಾಗಲೇ ಆರೋಪಿ ಅಶ್ವಿನಿಗೆ ಮೂರು ಹೆಣ್ಣು ಮಕ್ಕಳಿದ್ದು, ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು.
ನ.23ರಂದು ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆರಿಗೆಯಾಗಿತ್ತು. ಮಾರನೇ ದಿನ ಅಶ್ವಿನಿ ತಾಯಿ ಮನೆ ಹಿರೇಮುಲಂಗಿಗೆ ಬಂದಿದ್ದಳು. ನಿನ್ನೆ ಬೆಳಿಗ್ಗೆ ತಾಯಿ ಹೊರಹೋದಾಗ ಮಗಳ ಕತ್ತು ಹಿಸುಕಿ, ಮಗು ಉಸಿರಾಡುತ್ತಿಲ್ಲ ಎಂದು ಡ್ರಾಮಾ ಮಾಡಿದ್ದಾಳೆ.
ಕೂಡಲೇ ಮಗುವನ್ನು ರಾಮದುರ್ಗ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಗ ವೈದ್ಯರು ಕತ್ತು ಹಿಸುಕಿ ಉಸಿರು ಗಟ್ಟಿಸಿದ್ದಕ್ಕೆ ಮಗು ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ.
ಸದ್ಯ ತಾಯಿ ಅಶ್ವಿನಿ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದು, ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ ಚಿದಂಬರ ಮಡಿವಾಳರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















