ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಲೋಕಸಭಾ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ಅತ್ಯಂತ ವಿನಮ್ರ ಭಾವದಿಂದ ಗೌರವಿಸುತ್ತೇವೆ. ನೂತನ ಸಂಸದರಾಗಿ ಆಯ್ಕೆಯಾಗಿರುವ ಜಗದೀಶ ಶೆಟ್ಟರ್ #Jagadish Shettar ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ #Minister Lakshmi Hebbalkar ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ನಮ್ಮ ಪರವಾಗಿ ಕೆಲಸ ಮಾಡಿದ ಎಲ್ಲ ಕಾರ್ಯಕರ್ತರು, ಮುಖಂಡರು ಹಾಗೂ ಬೆಂಬಲಿಸಿದ ಎಲ್ಲ ಮತದಾರರಿಗೆ, ಸಹಕರಿಸಿದ ಮಾಧ್ಯಮದ ಸ್ನೇಹಿತರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲೆಯ ಎಲ್ಲ ಹಾಲಿ ಮತ್ತು ಮಾಜಿ ಶಾಸಕರು, ಪಕ್ಷದ ಮುಖಂಡರು ಹೆಚ್ಚಿನ ಸಹಕಾರ ನೀಡಿದ್ದಾರೆ. ಅವರೆಲ್ಲರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

Also read: ಪರಿಷತ್ ಚುನಾವಣೆ: ಮೊದಲ ಸುತ್ತಿನ ಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡಿರುವರು ಅಭ್ಯರ್ಥಿ ಇವರೇ
ನೂತನ ಸಂಸದರಾಗಿ ಆಯ್ಕೆಯಾಗಿರುವ ಜಗದೀಶ ಶೆಟ್ಟರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಅವರು ಜಿಲ್ಲೆಯ ಅಭಿವೃದ್ದಿಗೆ ಹೆಚ್ಚಿನ ಕೆಲಸ ಮಾಡಲಿ ಎಂದು ಶುಭ ಹಾರೈಸುತ್ತೇನೆ. ರಾಜ್ಯದಲ್ಲಿ ನಮ್ಮ ಸರಕಾರವಿರುವುದರಿಂದ ಜಿಲ್ಲೆಗೆ ಹೊಸ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು. ಎಲ್ಲರ ಸಹಕಾರದೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮುಂದುವರಿಸಲಾಗುವುದು. ಜನರ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿಕೊಂಡು ಮುನ್ನಡೆಯಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post