ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಹೊಸ ವರ್ಷಾಚರಣೆ ಬಹಿರಂಗ ಸಂತೋಷ ಕೂಟಗಳ ಆಯೋಜನೆ ಮಾಡುವುದನ್ನು ನಿಷೇಧಿಸಲಾಗಿದ್ದು, ಕೋವಿಡ್-19 ನಿಯಂತ್ರಣ ಭಾಗವಾಗಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದರು.
ಡಿಸೆಂಬರ್ 30 ರಿಂದ ಜನವರಿ 2ರವರೆಗೂ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ಯಾವುದೇ ಪಾರ್ಟಿಗಳನ್ನು ಮಾಡುವಂತಿಲ್ಲ. ಅಪಾರ್ಟ್ಮೆಂಟುಗಳಲ್ಲಿ ಜನರನ್ನ ಸೇರಿಸಿ ಸಂಭ್ರಮಾಚರಣೆ ಮಾಡುವಂತಿಲ್ಲ. ಬಾರ್ ಅಂಡ್ ರೆಸ್ಟೋರೆಂಟ್ ಸಿಬ್ಬಂದಿಗೆ ಎರಡು ಡೋಸ್ ವ್ಯಾಕ್ಸಿನೇಷನ್ ಕಡ್ಡಾಯ. ದೊಡ್ಡ ಮಟ್ಟದಲ್ಲಿ ಪಾರ್ಟಿ ಆಯೋಜನೆ ಮಾಡುವಂತಿಲ್ಲ. ಕೋವಿಡ್ ನಿಯಮ ಪಾಲನೆ ಕಡ್ಡಾಯ ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















