ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಸ್ವತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅವರ ಪುತ್ಥಳಿಯನ್ನು ಭಗ್ನಗೊಳಿಸಿ ಅವಮಾನ ಮಾಡಿ, ಸರ್ಕಾರಿ ವಾಹನಗಳನ್ನು ಜಖಂಗೊಳಿಸಿದ ಎಂಇಎಸ್ ಸಂಘಟನೆಯ ವಿರುದ್ಧ ಅಧಿವೇಶನದಲ್ಲಿ ಖಂಡನಾ ನಿರ್ಣಯ ಅಂಗೀಕರಿಸಿದ್ದು, ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ.
ಈ ಕುರಿತಂತೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಂಡನಾ ನಿರ್ಣಯ ಮಂಡಿಸಿದ್ದು, ಸರ್ವಾನುಮತದಿಂದ ಎಲ್ಲರೂ ಅಂಗೀಕರಿಸಿದ್ದಾರೆ.
ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಹಾನ್ ಚೇತನಗಳಾದ ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ. ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೇ, ವಿವರಗಳನ್ನು ಕೇಂದ್ರ ಗೃಹ ಇಲಾಖೆಗೆ ಕಳಿಸಿಕೊಡಲಾಗುವುದು ಎಂದರು.

ಇನ್ನು, ಎಂಇಎಸ್ ನಿಷೇಧದ ಕುರಿತಾಗಿ ಕಾನೂನಾತ್ಮಕ ಚಿಂತನೆಗಳನ್ನು ನಡೆಸುತ್ತಿದ್ದು, ಇದರ ನಿಯಂತ್ರಣಕ್ಕೆ ಸಕಲ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post