ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಮನೆ ಆವರಣದಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗುವೊಂದು ಸಂಪ್’ನಲ್ಲಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ.
ಇಲ್ಲಿನ ಕಂಗ್ರಾಳ ಗಲ್ಲಿಯಲ್ಲಿ ಘಟನೆ ನಡೆದಿದ್ದು, ಮೃತ ಮಗುವನ್ನು ಸಾಯೀಶಾ ಎಂದು ಗುರುತಿಸಲಾಗಿದೆ.
ಮನೆಯ ಆವರಣದಲ್ಲಿ ಆಟವಾಡುತ್ತಿದ್ದ ಮಗು ಕಣ್ಮರೆಯಾಗಿದ್ದು, ಪೋಷಕರಿಗೆ ತೀವ್ರ ಹುಡುಕಾಟ ನಡೆಸಿದ್ದಾರೆ.
ಎಲ್ಲ ಕಡೆಗಳಲ್ಲೂ ಸಹ ಎಷ್ಟೇ ಹುಡುಕಿದರೂ ಮಗು ಕಾಣದಿದ್ದಾಗ ಅನುಮಾನಗೊಂಡು ಸಂಪ್ ತೆರೆದು ನೋಡಿದಾಗ ಮಗು ಬಿದ್ದಿರುವುದು ಕಂಡಿದೆ. ಕೂಡಲೇ ಮಗುವನ್ನು ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ಕರೆತರುವ ಮುನ್ನವೇ ಮಗು ಸಾವಿಗೀಡಾಗಿದೆ ಎಂದು ವರದಿಯಾಗಿದೆ.
Also read: ಪರಿಷತ್ ಚುನಾವಣೆ | ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಮತಬೇಟೆ
ಖಡೇ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

























