ಕಲ್ಪ ಮೀಡಿಯಾ ಹೌಸ್ | ಬೆಳಗಾವಿ ಸುವರ್ಣಸೌಧ |
ರಾಜ್ಯದಲ್ಲಿ ಈವರೆಗೂ 1,81,699 ಪದವೀಧರರು ಯುವನಿಧಿ ಯೋಜನೆ #Yuvanidhi Scheme ಅಡಿ ನೋಂದಣಿ ಮಾಡಿಕೊಂಡಿದ್ದು, ನೋಂದಣಿ ಮಾಡಿಕೊಂಡವರಲ್ಲಿ ಈವರೆವಿಗೂ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ಅವರು ಇಂದು ವಿಧಾನ ಪರಿಷತ್ ನಲ್ಲಿ ಸದಸ್ಯ ಕೆ.ಎಸ್.ನವೀನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.
Also read: ಶಿವಮೊಗ್ಗ | ರಾಷ್ಟ್ರೀಯ ಏರೋಬಿಕ್ಸ್, ಹಿಪ್ ಹಾಪ್ | ಪಿಇಎಸ್ ಶಾಲೆಗೆ ಚಿನ್ನದ ಪದಕ
ಯುವನಿಧಿ ಯೋಜನೆ ಅಡಿ ನೋಂದಾಯಿಸಿದ ಅರ್ಹ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಈ ಯೋಜನೆ ತಲುಪುತ್ತಿದೆ ಎಂದರು.
ಯುವನಿಧಿ ಯೋಜನೆ ಅಡಿಯಲ್ಲಿ ನೋಂದಾಯಿಸಿದ ಅಭ್ಯರ್ಥಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ಇದನ್ನು ನೀಡದೆ ಇದ್ದಲ್ಲಿ ಭತ್ಯೆ ಸ್ಥಗಿತಗೊಳ್ಳಲಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post