ಕಲ್ಪ ಮೀಡಿಯಾ ಹೌಸ್
ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣ ಧಾರಾವಾಹಿಯಂತೆ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ. ವೀಡಿಯೋ, ಆಡಿಯೋ ನಂತರ ಇದೀಗ ಸಿಡಿ ಲೇಡಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ ಎಂದು ತಿಳಿದುಬಂದಿದೆ.
ತನ್ನನ್ನೇ ಆರೋಪಿಯಂತೆ ವಿಚಾರಣೆ ನಡೆಸುತ್ತಿದ್ದು, ತಾನು ದೂರು ನೀಡಿರುವ ರಮೇಶ ಜಾರಕಿಹೊಳಿ ಅವರನ್ನು 3 ಗಂಟೆ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಲಾಗಿದೆ ಎಂದು ಸಂತ್ರಸ್ತ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಬೇಕಾದ ತಂತ್ರ ರೂಪಿಸಲಾಗಿದೆ. ಪೊಲೀಸರೇ ಸಾಕ್ಷಿಗಳನ್ನು ನಾಶಪಡಿಸುತ್ತಿದ್ದಾರೆ ಎಂದೂ ಆರೋಪಿಸಿರುವ ಯುವತಿ, ಇದೆಲ್ಲದರ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿರುವ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿ, ಅದರಿಂದ ನನಗೆ ಶಾಕ್ ಆಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ.
ರಮೇಶ ಜಾರಕಿಹೊಳಿ ಆರೋಪ ಮುಕ್ತರಾಗಿ ಹೊರಗೆ ಬರುತ್ತಾರೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಅಂದರೆ ಅವರ ಅಧೀನದಲ್ಲಿರುವ ಎಸ್‌ಐಟಿ ಹೇಗೆ ತನಿಖೆ ನಡೆಸಬಹುದು. ಮುಖ್ಯಮಂತ್ರಿಯವರ ಈ ಮಾತು ತನಿಖೆಯ ಮೇಲೆ ಪರಿಣಾಮ ಬೀರಲಿದೆ. ಈ ಮಾತು ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದನ್ನು ತೋರಿಸುತ್ತದೆ ಎಂದು ಯುವತಿ ಪತ್ರದಲ್ಲಿ ಹೇಳಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















