ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನು ಹೇಳಿಕೆ ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಟೀಕಿಸಿದರು.
ಆದಿತ್ಯ ಠಾಕ್ರೆ #Adithya Takre ನೀಡಿದ ಹೇಳಿಕೆ ಬಗ್ಗೆ ಸುವರ್ಣಸೌಧದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
Also read: ಜನಪದ ಸಶಕ್ತ ಮಾಧ್ಯಮ ಅದನ್ನು ಕಲಿಯಿರಿ: ಜನಪದ ಗಾಯಕ ಮಹದೇವಸ್ವಾಮಿ
ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು #Mahajan Report ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ ಸಿಎಂ ಈ ಕಾರಣಕ್ಕೇ ಇದೊಂದು ಬಾಲಿಶ ಹೇಳಿಕೆ ಎಂದರು.
MES ನವರು ಇದೇ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರೇ ಪುಂಡಾಟಿಕೆ ಮಾಡಿದರೂ ಸುಮ್ಮನಿರಲ್ಲ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post