ಕಲ್ಪ ಮೀಡಿಯಾ ಹೌಸ್
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರ ಪರವಾಗಿ ರಾಮದುರ್ಗ ವಿಧಾನ ಸಭಾ ಕ್ಷೇತ್ರದ ಮುಳ್ಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಸಾರ್ವಜನಿಕರೊಂದಿಗೆ ಸಭೆ ನಡೆಸಿ, ಬೆಳಗಾವಿ ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತೊಮ್ಮೆ ಬಿಜೆಪಿ ಪಕ್ಷಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಮಹಾದೇವಪ್ಪ ಯಾದವಾಡ, ಅಮರಸಿಂಹ ಪಾಟಿಲ್, ಹಾಗೂ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















