No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿ: ಡಿಸಿಎಂ ಗೋವಿಂದ ಕಾರಜೋಳ

kalpa News by kalpa News
May 6, 2021
in ಬೆಳಗಾವಿ
0
ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿ: ಡಿಸಿಎಂ ಗೋವಿಂದ ಕಾರಜೋಳ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ಆಕ್ಸಿಜನ್, ರೆಮಿಡಿಸಿವಿರ್ ಒದಗಿಸುವುದರ ಜತೆಗೆ ಕೋವಿಡ್ ನಿಯಂತ್ರಣಕ್ಕೆ ಸರಕಾರ ಜಾರಿಗೊಳಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ (ಮೇ. 6) ನಡೆದ ಉನ್ನತಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದಲ್ಲದೇ ಮಾರ್ಗಸೂಚಿ ಪಾಲಿಸಲು ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳಬೇಕು. ಆಕ್ಸಿಜನ್ ಲಭ್ಯತೆ ಬಗ್ಗೆ ನಿರಂತರ ನಿಗಾ ವಹಿಸಬೇಕು. ಖಾಸಗಿ ಅಥವಾ ಸರಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಬಾರದು. ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ 24 ತಾಸು ಕೆಲಸ ಮಾಡಬೇಕು ವೈದ್ಯರು ಸ್ವತಃ ಕೋವಿಡ್ ವಾರ್ಡುಗಳಿಗೆ ಹೋಗಿ ನಿಯಮಿತವಾಗಿ ಪರಿಶೀಲಿಸಬೇಕು ಎಂದು ಶ್ರೀ ಗೋವಿಂದ ಕಾರಜೋಳ ತಿಳಿಸಿದರು.

ಗೋಕಾಕ, ಸವದತ್ತಿ ಹಾಗೂ ಬೆಳಗಾವಿ ಸೇರಿದಂತೆ ಕೆಲ ತಾಲ್ಲೂಕುಗಳಲ್ಲಿ ಸೋಂಕಿನ‌ ಪ್ರಮಾಣ ದಿಢೀರ್ ಹೆಚ್ಚಳವಾಗಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಡಿಸಿಎಂ, ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ತಪಾಸಣೆಗೆ ಅಗತ್ಯವಿರುವ ಪ್ರಯೋಗಾಲಯದ ಸ್ಥಾಪನೆಗೆ ಅಗತ್ಯವಿರುವ ಪ್ರಸ್ತಾವವನ್ನು ಕಳಿಸಿದರೆ ಇದಕ್ಕೆ ಸರಕಾರದ ಮಟ್ಟದಲ್ಲಿ ಮಂಜೂರಾತಿ ಒದಗಿಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ಮೊದಲ ಲಸಿಕೆ ಪಡೆದುಕೊಂಡಿರುವವರಿಗೆ ಆದ್ಯತೆ ಮೇರೆಗೆ ಎರಡನೇ ಡೋಸ್ ಲಸಿಕೆ‌ ನೀಡಬೇಕು.
ಲಸಿಕೆ ವ್ಯರ್ಥವಾಗದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕು.

ಬಿಮ್ಸ್ ಗೆ ಇನ್ನೊಂದು ಆಕ್ಸಿಜನ್ ಘಟಕ- ಪ್ರಸ್ತಾವಕ್ಕೆ ಸೂಚನೆ:
ಬಿಮ್ಸ್ ಗೆ ಇನ್ನೊಂದು ಆಕ್ಸಿಜನ್ ಸಂಗ್ರಹ ಘಟಕ ಸ್ಥಾಪಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗಿದೆ. ಈ‌ ಕುರಿತು ಪ್ರಸ್ತಾವ ಸಲ್ಲಿಸಲು ತಿಳಿಸಿದರು.

ಓ.ಎನ್.ಜಿ.ಸಿ‌ ಆಕ್ಸಿಜೆನ್ ಘಟಕವನ್ನು ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸ್ಥಾಪಿಸಲು ಮನವಿ ಮಾಡಿಕೊಳ್ಳಲಾಗಿದೆ. ಆದ್ದರಿಂದ ಸ್ಥಳ ಗುರುತಿಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಕೂಡಲೇ ಪತ್ರ ಬರೆಯುವಂತೆ ನಿರ್ದೇಶನ ನೀಡಿದರು.

ಆಕ್ಸಿಜನ್ ಕೊರತೆಯಾಗದಂತೆ ಹೆಚ್ಚುವರಿ ಟ್ಯಾಂಕರ್ ಅಥವಾ ಚಾಲಕರನ್ನು ನಿಯೋಜಿಸಲು ಸೂಚನೆ ನೀಡಿದರು. ಕೆಲವು ಕಡೆಗಳಲ್ಲಿ ರೋಗಿಗಳಿಗೆ ನಿಗದಿತ‌ ಪ್ರಮಾಣಕ್ಕಿಂತ ಹೆಚ್ಚಿನ ಆಕ್ಸಿಜನ್ ಬಳಕೆ ಮಾಡಲಾಗುತ್ತಿದೆ ಎಂದು ದೂರುಗಳಿವೆ. ಆದ್ದರಿಂದ ಈ ಬಗ್ಗೆ ಆಸ್ಪತ್ರೆಗಳಲ್ಲಿ ವೈದ್ಯರು ನಿಗಾ ವಹಿಸಬೇಕು ಎಂದು ಶ್ರೀ ಗೋವಿಂದ ಕಾರಜೋಳ ಅವರು ಬಿಮ್ಸ್ ಅಧಿಕಾರಿಗಳಿಗೆ ನಿರ್ದೆಶನ ನೀಡಿದರು.

ವಾರ್ ರೂಮ್ ಚುರುಕುಗೊಳಿಸಲು ನಿರ್ದೇಶನ:
ಸೋಂಕಿತರಿಗೆ ತುರ್ತು ಚಿಕಿತ್ಸೆ ಮತ್ತು ಬೆಡ್ ಒದಗಿಸುವುದಕ್ಕೆ ಸಂಬಂಧಿಸಿದಂತೆ ವಾರ್ ರೂಮ್ ನಲ್ಲಿ ಸಮರ್ಪಕವಾಗಿ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ವಾರ್ ರೂಮ್ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಚುರುಕುಗೊಳಿಸಬೇಕು ಎಂದು ಡಿಸಿಎಂ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟಾರೆ 102 ಆಂಬ್ಯುಲೆನ್ಸ್ ಗಳಿವೆ.‌ ಇವುಗಳ ಸಂಚಾರದ ಮೇಲೆ ನಿಗಾವಹಿಸಬೇಕು. ಸದ್ಬಳಕೆ ಮಾಡಿಕೊಳ್ಳಲು ಕಡ್ಡಾಯವಾಗಿ ಲಾಗ್ ಬುಕ್ ನಿರ್ವಹಿಸಲು ಮತ್ತು ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಒದಗಿಸಲು‌ ವೆಬ್ ಸೈಟ್ ಅಭಿವೃದ್ಧಿಪಡಿಸಲು ತಿಳಿಸಿದರು.

ಸಕ್ಕರೆ ಕಾರ್ಖಾನೆಗಳಿಂದ ಸಿಲಿಂಡರ್ ಬಳಕೆಗೆ ಸಲಹೆ:
ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಆಕ್ಸಿಜನ್ ಸಿಲಿಂಡರ್ ಗಳನ್ನು ಜಿಲ್ಲಾಡಳಿತ ತನ್ನ ವಶಕ್ಕೆ ಪಡೆದುಕೊಂಡು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಕಲ್ಪಿಸಬೇಕು. ಪರಿಸ್ಥಿತಿ ಸುಧಾರಿಸಿದ ಬಳಿಕ ಆಯಾ ಕಾರ್ಖಾನೆಗಳಿಗೆ ಸಿಲಿಂಡರ್ ಗಳನ್ನು ಹಿಂದಿರುಗಿಸಬೇಕು.‌ ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಎಲ್ಲರೂ ಸಹಕಾರ ನೀಡಲಿದ್ದು, ಇದನ್ನು‌ ಬಳಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಮಹಾರಾಷ್ಟ್ರದಲ್ಲಿ ಇಥೆನಾಲ್ ಘಟಕ ಹೊಂದಿರುವ ಸಕ್ಕರೆ ಕಾರ್ಖಾನೆಗಳು ಆಕ್ಸಿಜನ್ ಉತ್ಪಾದಿಸಿ ಸರಬರಾಜು ಮಾಡುತ್ತಿವೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು.
ಇನ್ನು ಕೆಲವು ದಿನಗಳಲ್ಲಿ ರೆಮಿಡಿಸಿವಿರ್ ಬೆಳಗಾವಿಯಲ್ಲಿ ಉತ್ಪಾದನೆ ಯಾಗಲಿದ್ದು, ಇದರಿಂದ ಕೊರತೆ ನೀಗಲಿದೆ ಎಂದರು.

ಆರೋಗ್ಯ ಇಲಾಖೆಯ ಸಿಬ್ಬಂದಿ ಕೊರತೆಗೆ ತಕ್ಷಣವೇ ಕ್ರಮ‌ಕೈಗೊಳ್ಳಬೇಕು. ಸಹಾಯವಾಣಿ ಸಮರ್ಪಕವಾಗಿ ಬಳಸಬೇಕು. ಸಹಾಯ ಅಥವಾ ಮಾಹಿತಿ ಕೇಳುವ ಸಾರ್ವಜನಿಕರಿಗೆ ತಕ್ಷಣವೇ ಮಾಹಿತಿಯನ್ನು ಒದಗಿಸಬೇಕು. ಪ್ರತಿ ಕರೆಗಳಿಗೂ ಸೂಕ್ತ ಸ್ಪಂದನೆ ಇರಬೇಕು. ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು 200 ಆಕ್ಸಿಜನ್ ಬೆಡ್ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಇದರ ಪ್ರಯೋಜನ ಪಡೆಯುವಂತೆ ಸಚಿವರು ತಿಳಿಸಿದರು.

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವುದಕ್ಕೆ ಸಂಬಂಧಿಸಿದಂತೆ ಏನೇ ಅವಶ್ಯಕತೆಯಿದ್ದರೆ ತಕ್ಷಣವೇ ತಮ್ಮ ಗಮನಕ್ಕೆ ತರುವಂತೆ ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಶ್ರೀ ಉಮೇಶ್ ಕತ್ತಿ ಅವರು, ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಇರುವ ಬೆಡ್ ಗಳ ಹಂಚಿಕೆಗೆ ಒಂದು ಸಮಿತಿ ರಚಿಸಬೇಕು. ಅದರ ಮೂಲಕವೇ ಬೆಡ್ ಹಂಚಿಕೆ ಮಾಡಬೇಕು. ಜಿಲ್ಲೆಯಲ್ಲಿ 25 ಸಕ್ಕರೆ ಕಾರ್ಖಾನೆಗಳಿದ್ದು, ಅವರಿಂದ ಸಿಲಿಂಡರ್ ಪಡೆದುಕೊಳ್ಳಬೇಕು ಎಂದರು.

ಕರ್ತವ್ಯ ನಿರ್ಲಕ್ಷ್ಯ; ಫಾರ್ಮಾಸಿಸ್ಟ್ ವಿರುದ್ಧ ಕ್ರಮಕ್ಕೆ ಸಚಿವರ ಸೂಚನೆ:
ಇದೇ ವೇಳೆ ಮಾತನಾಡಿದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ ಅವರು,  ಬಿಮ್ಸ್ ನಲ್ಲಿ 850 ಆಕ್ಸಿಜನ್ ಬೆಡ್ ಗಳಿದ್ದು, ಅವುಗಳಿಗೆ ಸಮರ್ಪಕ ಆಕ್ಸಿಜನ್ ಪೂರೈಕೆ ವ್ಯವಸ್ಥೆ ಮಾಡಿದರೆ ಸಮಸ್ಯೆಯನ್ನು ಪರಿಹರಿಸಬಹುದು ಎಂದು ಹೇಳಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಬಂಧಿಕರು ಕೂಡ ಕೋವಿಡ್ ವಾರ್ಡುಗಳಿಗೆ ಹೋಗುತ್ತಿರುವುದಕ್ಕೆ ಕಡಿವಾಣ ಹಾಕುವಂತೆ ಸೂಚನೆ ನೀಡಿದರು.

ಬಿಮ್ಸ್ ನ‌ ಫಾರ್ಮಾಸಿಸ್ಟ್ ಅವರು ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಆದ್ದರಿಂದ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಸ್ಪಂದಿಸಿದ ಡಿಸಿಎಂ , ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಫಾರ್ಮಾಸಿಸ್ಟ್ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಜಿಲ್ಲಾ ಸರ್ಜನ್ ಅವರಿಗೆ ಸೂಚನೆ ನೀಡಿದರು.

ಆಂಬ್ಯುಲೆನ್ಸ್ ಸೇವೆ ಒದಗಿಸಲು ಸಾವಿರಾರು ರೂಪಾಯಿ ಹಣವನ್ನು ಅಕ್ರಮವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ಉತ್ತರ ಶಾಸಕ  ಅನಿಲ್ ಬೆನಕೆ ಹೇಳಿದರು.

ತಾಲ್ಲೂಕು ಮಟ್ಟದಲ್ಲಿ ಸೋಂಕಿತರ ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ನೂರು‌ ಬೆಡ್ ಗಳ ಆಸ್ಪತ್ರೆ ಆರಂಭಿಸಬೇಕು. ಇದರಿಂದ ಜಿಲ್ಲಾ ಕೇಂದ್ರದ ಮೇಲೆ ಒತ್ತಡ ಕಡಿಮೆಯಾಗಲಿದೆ ಎಂದು ಚನ್ನಮ್ಮನ ಕಿತ್ತೂರು ಶಾಸಕ  ಮಹಾಂತೇಶ ದೊಡಗೌಡ್ರ ತಿಳಿಸಿದರು.

ಜಿಲ್ಲಾಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಾರ್ ರೂಮ್ ಹಾಗೂ ಅದರ ಬಳಕೆ ಕುರಿತು ‌ಹೆಚ್ಚಿನ ಮಾಹಿತಿಯನ್ನು ಜನರಿಗೆ ನೀಡಬೇಕು ಎಂದು ಸಲಹೆ ನೀಡಿದರು.

ನಗರದ ಎಲ್ಲ ಪ್ರದೇಶದಲ್ಲಿ ಪ್ಯೂಮಿಗೇಷನ್ ಮಾಡುವಂತೆ ಸಂಸದೆ ಮಂಗಲಾ ಅಂಗಡಿ ಅವರು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಂಕಿನ ಪ್ರಮಾಣ ಸರಾಸರಿ ಶೇ.20: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್
ಜಿಲ್ಲೆಯಲ್ಲಿ ಸೋಂಕಿನ‌ ಪ್ರಮಾಣ ಸದ್ಯಕ್ಕೆ ಸರಾಸರಿ ಶೇ.20 ರಷ್ಟಿದೆ. ಸರಕಾರದ ಮಾರ್ಗಸೂಚಿ ಪ್ರಕಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಆದಾಗ್ಯೂ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅಭಿಪ್ರಾಯಪಟ್ಟರು.

ಸೋಮವಾರದಿಂದ 36 ಗಂಟೆಗಳಲ್ಲಿ ಕೋವಿಡ್ ತಪಾಸಣಾ ವರದಿ ನೀಡಲು ಕ್ರಮಕೈಗೊಳ್ಳಲಾಗುವುದು. ಸದ್ಯಕ್ಕೆ 3 ಸಾವಿರ ಮಾದರಿಯ ವರದಿ ನೀಡಬೇಕಿದೆ ಎಂದು ತಿಳಿಸಿದರು.

ಸರಕಾರದ ಆಸ್ಪತ್ರೆಗಳಿಗಿಂತ ಹೆಚ್ಚು ಜನರು ಖಾಸಗಿ ಆಸ್ಪತ್ರೆಗಳಲ್ಲಿದ್ದಾರೆ. ಪೊಲೀಸರಿಗೆ ಶೇ.100 ರಷ್ಟು ಲಸಿಕೆ ಒದಗಿಸಲು ಬೇಡಿಕೆಯಿದೆ.‌ ಅದೇ ರೀತಿ ಮಾಧ್ಯಮ ಪ್ರತಿನಿಧಿಗಳಿಗೂ ಲಸಿಕೆ ನೀಡಬೇಕಿದೆ. ಜಿಲ್ಲೆಯಲ್ಲಿ 50 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವುದರಿಂದ ಹೆಚ್ಚಿನ ಲಸಿಕೆ ಪೂರೈಸುವ ಅಗತ್ಯವಿದೆ. ಜಿಲ್ಲೆಯ ಸರಕಾರಿ- ಖಾಸಗಿ ಆಸ್ಪತ್ರೆಗಳಲ್ಲಿ 1343 ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ 270 ಜನರು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕ್ಸಿಜನ್ ಸಂಗ್ರಹ ಸಾಮರ್ಥ್ಯ ಚೆನ್ನಾಗಿದ್ದು, ಹೆಚ್ಚಿನ ಪ್ರಮಾಣದ ಪೂರೈಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಬಿಮ್ಸ್ ನಲ್ಲಿ ಇನ್ನೊಂದು ಆಕ್ಸಿಜನ್ ಘಟಕ:
ಹೊಸದಾಗಿ 500 ಲೀಟರ್ ಸಾಮರ್ಥ್ಯದ ಒಂದು ಘಟಕವನ್ನು ಬಿಮ್ಸ್ ಆವರಣದಲ್ಲಿ ಸ್ಥಾಪನೆಗೆ ಮಂಜೂರಾತಿ ದೊರೆತಿದ್ದು, ಇಪ್ಪತ್ತು ದಿನಗಳಲ್ಲಿ ಕಾರ್ಯಾರಂಭಿಸಲಿದೆ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ಸಭೆಯಲ್ಲಿ ತಿಳಿಸಿದರು.

ಬಿಮ್ಸ್ ನಲ್ಲಿ ಸರಕಾರದ ಮಾರ್ಗಸೂಚಿ ಪ್ರಕಾರ ಊಟ ಮತ್ತಿತರ ವ್ಯವಸ್ಥೆಯನ್ನು ರೋಗಿಗಳಿಗೆ ಕಲ್ಪಿಸಲಾಗಿದೆ.
ಇರುವ ಸಿಬ್ಬಂದಿ ಮೂರು ಪಾಳಿಗಳಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ.‌ ಆದ್ದರಿಂದ ಇನ್ನಷ್ಟು ಸಿಬ್ಬಂದಿ ಅಗತ್ಯವಿದೆ ಎಂದರು.

ಐಜಿಪಿ‌ ರಾಘವೇಂದ್ರ ಸುಹಾಸ್, ಬೆಳಗಾವಿ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ್, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsBelagaviKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಯಲುಸೀಮೆಸುದ್ಧಿಬೆಳಗಾವಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್ ಆರೈಕೆ ಕೇಂದ್ರವಾಗಿ ಮಾರ್ಪಾಡಾದ ಜಿಕೆವಿಕೆ ವಿದ್ಯಾರ್ಥಿ ನಿಲಯ!

Next Post

ಸತತ 2ನೆಯ ದಿನವೂ ಭದ್ರಾವತಿಯಲ್ಲೇ ಅತಿ ಹೆಚ್ಚು ಕೊರೋನಾ ಪಾಸಿಟಿವ್, ಜಿಲ್ಲೆಯಲ್ಲಿ 16 ಬಲಿ

kalpa News

kalpa News

Next Post
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಸತತ 2ನೆಯ ದಿನವೂ ಭದ್ರಾವತಿಯಲ್ಲೇ ಅತಿ ಹೆಚ್ಚು ಕೊರೋನಾ ಪಾಸಿಟಿವ್, ಜಿಲ್ಲೆಯಲ್ಲಿ 16 ಬಲಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL