ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಉಡುಪಿ ಜಿಲ್ಲೆಯ ನೇಜಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ Lakshmi Hebbalkar ಭೇಟಿ ನೀಡಿದರು.
ಕಳೆದ ಭಾನುವಾರ ತಾಯಿ, ಮಗಳು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಕೊಲೆ ಮಾಡಲಾಗಿತ್ತು. ಮೃತ ಹಸೀನಾ ಪತಿ ನೂರ್ ಮೊಹಮದ್ ಹಾಗೂ ಅವರ ಮಗ ಆಸಾದ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಭೇಟಿಯಾದ ಸಚಿವರು ಅವರಿಗೆ ಸಾಂತ್ವನ ಹೇಳಿದರು.

ಕುಟುಂಬದ ನಾಲ್ಕ ಸದಸ್ಯರನ್ನು ಅಮಾನುಷವಾಗಿ ಕೊಂದ ವ್ಯಕ್ತಿ ರಾಕ್ಷಸ ಕೃತ್ಯ ಎಸಗಿದ್ದಾನೆ. ಮೃತರ ಕುಟುಂಬದ ಜೊತೆ ಸರ್ಕಾರವಿದ್ದು, ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ ಎಂದು ಸಚಿವರು ಪತ್ರಕರ್ತರಿಗೆ ತಿಳಿಸಿದರು. ಆರೋಪಿಯನ್ನು ತ್ವರಿತವಾಗಿ ಬಂಧಿಸುವ ಮೂಲಕ ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದ್ದು, ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಮಾಡುತ್ತೇವೆ ಎಂದರು.
Also read: ಉದ್ಯಮಿಯ ದರೋಡೆ | ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿ, ಮಧ್ಯ ಕುಡಿಸಿ, ಸಿಗರೇಟಿನಿಂದ ಸುಟ್ಟ ರಾಕ್ಷಸರು
ಉಡುಪಿ ಶಾಂತಿ ಪ್ರಿಯ ಜಿಲ್ಲೆ, ಇಂತಹ ಜಿಲ್ಲೆಯಲ್ಲಿ ಹೀಗಾಗಬಾರದಿತ್ತು. ಮುಂಜಾಗ್ರತಾ ಕ್ರಮ ಕೈಗೊಳ್ಖುತ್ತೇವೆ, ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದು ಭರವಸೆ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post