ಕಲ್ಪ ಮೀಡಿಯಾ ಹೌಸ್
ಬಳ್ಳಾರಿ: ಹೊಸಪೇಟೆ, ಕಂಪ್ಲಿ, ರಾಯಚೂರು ಮತ್ತು ಆಂಧ್ರಪ್ರದೇಶದ ಅನೇಕ ರೈತರಿಗೆ ತುಂಗಭದ್ರಾ ಜಲಾಶಯವು ವರದಾನವಾಗಿದ್ದು, ಜಲಾಶಯದ ನೀರಿನ ಮಟ್ಟ ಹೆಚ್ಚಾಗಿಗುತ್ತಿದೆ. ಈ ಪ್ರದೇಶದ ರೈತರು ತಕ್ಷಣವೇ ನೀರಾವರಿಗೆ ನೀರು ಹಾಯಿಸುವಂತೆ ಜಲ ಮಂಡಳಿಗೆ ಮನವಿ ಮಾಡಿದ್ದಾರೆ.
ಶಿವಮೊಗ್ಗ ಮತ್ತು ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆ ಆಗಿರುವುದರಿಂದ ೩೫ಕ್ಕೂ ಹೆಚ್ಚು ಟಿಎಂಸಿ ನೀರು ಹರಿದು ಬಂದಿದೆ. ತುಂಗಭದ್ರಾ ಜಲಾಶಯವು ಈ ವರ್ಷದ ಆರಂಭದಲ್ಲಿ ತುಂಬುವ ಸಾಧ್ಯತೆಯಿದೆ. ಆದರೆ ಟಿಬಿ ಮಂಡಳಿಯ ನೀರಾವರಿ ಸಲಹಾ ಸಮಿತಿ ಸಭೆ ಇನ್ನೂ ನಡೆಯದಿರುವ ಹಿನ್ನೆಲೆಯಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ವರದಿ: ಮುರಳಿಧರ್ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post