ಕಲ್ಪ ಮೀಡಿಯಾ ಹೌಸ್
ಬಳ್ಳಾರಿ: ಜಿಲ್ಲೆಯಲ್ಲಿ ಕೊರೋನಾ ಹೆಚ್ಚಳ ಹಿನ್ನಲೆ ನಾಳೆಯಿಂದ ಸಂಪೂರ್ಣ ಜಾರಿ ಮಾಡಲಾಗಿದೆ ಎಂದು ಸಚಿವ ಆನಂದ ಸಿಂಗ್ ತುರ್ತು ತಿಳಿಸಿದರು
ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ನಾಳೆಯಿಂದ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಗಿದ್ದು, ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಿಗ್ಗೆ ಆರು ಘಂಟೆಯಿಂದ ಹತ್ತು ಗಂಟೆವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಅಗತ್ಯ ವಸ್ತುಗಳನ್ನು ಆ ಸಮಯದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ತರಲು ಅವಕಾಶ ಇದೆ ಎಂದು ಹೇಳಿದರು.
ನಂತರ ಯಾರು ಕೂಡ ಹೊರಗೆ ಬರೋದಕ್ಕೆ ಅವಕಾಶ ಇಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ವಿಷಯಕ್ಕೆ ಮಾತ್ರ ವಿನಾಯಿತಿ ಇದೆ. ಬೇರೆ ಉಳಿದ ಯಾವುದೇ ಚಟುವಟಿಕೆಗೆ ಅವಕಾಶ ಇರುವುದಿಲ್ಲ. ಕೊರೋನಾ ಪಾಸಿಟಿವ್ ಸಂಖ್ಯೆಯಲ್ಲಿ ರಾಜ್ಯದಲ್ಲಿ ಬಳ್ಳಾರಿ ಮೂರನೇ ಸ್ಥಾನದಲ್ಲಿದೆ. ಮತ್ತು ಸಾವಿನ ಸಂಖ್ಯೆಯಲ್ಲಿ ಜಿಲ್ಲೆ ಎರಡನೆಯ ಸ್ಥಾನದಲ್ಲಿ ಇರುವ ಕಾರಣ ಕೆಲವು ಕಠಿಣ ನಿರ್ಧಾರ ಅನಿವಾರ್ಯವಾಗಿದೆ ಇದಕ್ಕೆ ಸಾರ್ವಜನಿಕರು ಸಹಕಾರ ಬಹಳ ಮುಖ್ಯ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post