ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಶಾಲೆಗಳಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ವಾರ್ಷಿಕ ಫಲಿತಾಂಶದಲ್ಲಿ ಜಿಲ್ಲೆ ಮೂಂಚೂಣಿಯಲ್ಲಿರಲು ಶ್ರಮಿಸಿ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು Minister Shriramulu ಅವರು ಶಿಕ್ಷಕರಿಗೆ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಕಂಟೋನ್ಮೆಂಟ್‍ನ ಎಸ್.ಕೆ. ಮೋದಿ ನ್ಯಾಷನಲ್ ಸ್ಕೂಲ್ ನಲ್ಲಿ ಆಯೋಜಿಸಲಾಗಿದ್ದ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳ ಸಮಾರಂಭಕ್ಕೆ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಸಮವಸ್ತ್ರ, ಶೂ, ಪುಸ್ತಕಗಳು, ಸುಸಜ್ಜಿ ಶಾಲಾ ಕಟ್ಟಡದ ಜೊತೆಗೆ ಗುಣಾತ್ಮಕ ಶಿಕ್ಷಣವನ್ನು ನೀಡುತ್ತಿದ್ದು ಇವುಗಳನ್ನು ಬಳಸಿಕೊಂಡು ಮಕ್ಕಳು ಉನ್ನತಮಟ್ಟಕ್ಕೆ ಬೆಳೆಯಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ ಮೀಸಲಾತಿಯನ್ನು ಹೆಚ್ಚಿಸಲಾಗಿದ್ದು, ಶಿಕ್ಷಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚು ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು ಎಂದು ಹೇಳಿದರು.

ಕೆಎಂಇಆರ್‍ಸಿ ಅನುದಾನದಲ್ಲಿ ಜಿಲ್ಲೆಗೆ ಸುಮಾರು 650ಕೋಟಿ ರೂ.ಗಳನ್ನು ಶಿಕ್ಷಣಕ್ಕೆ ಮೀಸಲಿರಿಸಿದ್ದು, ನೂತನ ತಂತ್ರಜ್ಞಾನದ ಮೂಲಕ ಹೊಸ ಶಾಲಾ-ಕಾಲೇಜುಗಳು, ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್‍ಗಳು ಹಾಗೂ ಶಾಲೆಗಳನ್ನು ಉನ್ನತೀಕರಣ ಮಾಡಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ತಿಳಿಸಿದರು.
Also read: ನಟ ವಸಿಷ್ಠ ಸಿಂಹ-ನಟಿ ಹರಿಪ್ರಿಯಾ ನಿಶ್ಚಿತಾರ್ಥ
ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಂತರದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ಸ್ಪರ್ಧಾ ಕಾರ್ಯಕ್ರಮಗಳು ನಡೆದವು.












Discussion about this post